Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಗ್ರಾಮೀಣ ಪ್ರದೇಶಗಳಲ್ಲಿ ಸೆಪ್ಟೆಂಬರ್ 24 ಮತ್ತು 25ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಸೆ.23: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ಶಾಖೆಯ ಉದ್ದೇಶಿತ ಗೊಡಬನಹಾಳ್ ವಿ.ವಿ.ಕೇಂದ್ರಕ್ಕೆ ಕೆಪಿಟಿಸಿಎಲ್ ಬೃಹತ್ ಕಾಮಗಾರಿ ವಿಭಾಗದಿಂದ ಗೋಪುರ ಸಂಖ್ಯೆ 1 ಮತ್ತು 84,85 ರ ಗೋಪುರ ನಿರ್ಮಾಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇದೇ ಸೆಪ್ಟೆಂಬರ್ 24 ಮತ್ತು 25ರಂದು ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎನ್.ಜೆ.ವೈ ಮತ್ತು ಐಪಿ ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 66/1 ಕೆವಿ ಪಂಡರಹಳ್ಳಿ ವಿವಿ ಕೇಂದ್ರದಿಂದ ಸರಬರಾಜಾಗುವ 11 ಕೆ.ವಿ ಮಾರ್ಗದಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಅನ್ನೆಹಾಳ್, ಹುಲ್ಲೂರು ಎನ್‍ಜೆವೈ, ಪಂಡರಹಳ್ಳಿ ಕಾವಲಹಟ್ಟಿ, ಜಾನುಕೊಂಡ, ಸಿದ್ದಾಪುರ, ಮಹದೇವನಕಟ್ಟೆ, ಗೊಡಬನಹಾಳ್, ಸೊಂಡೆಕೊಳ, ಸೊಲ್ಲಾಪುರ, ಕುರುಬರಹಳ್ಳಿ, ಬೆಟ್ಟದನಾಗೇನಳ್ಳಿ, ಸಿಂಗಾಪುರ ಮತ್ತು ಕಕ್ಕೇರು ಎನ್.ಜೆ.ವೈ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ.

ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳು: ಪಂಡರಹಳ್ಳಿ ವ್ಯಾಪ್ತಿಯ ಅನ್ನೆಹಾಳ್, ಹುಲ್ಲೂರು, ಪಂಡರಹಳ್ಳಿ ಕಾವಲಹಟ್ಟಿ, ಮಾಳಪ್ಪನಹಟ್ಟಿ, ಸಿದ್ದಾಪುರ, ಮಹದೇವನಕಟ್ಟೆ, ಗೊಡಬನಹಾಳ್, ಸೊಂಡೆಕೊಳ, ಕುರುಬರಹಳ್ಳಿ, ಬೆಟ್ಟದ ನಾಗೇನಹಳ್ಳಿ, ಸಿಂಗಾಪುರ ಹಾಗೂ ಕಕ್ಕೇರು ಗ್ರಾಮಗಳು ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...