Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 27 ರಂದು ಪಿಲಾಜನಹಳ್ಳಿಯಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿ ಸಭೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ. 23 : ರಾಷ್ಟ್ರೀಯ ಈಡಿಗ ಮಹಾಮಂಡಳಿ ಕರ್ನಾಟಕ, ಚಿತ್ರದುರ್ಗ ಜಿಲ್ಲಾ ರಾಷ್ಟ್ರೀಯ ಈಡಿಗ, ನಾಮಧಾರಿ, ಬಿಲ್ಲವ, ದಿವರು ಮಹಾಮಂಡಳಿವತಿಯಿಂದ ಸೆ. 27ರ ಶನಿವಾರ ಹಿರಿಯೂರು ತಾಲ್ಲೂಕಿನ ಪಿಲಾಜನಹಳ್ಳಿ ಗ್ರಾಮದಲ್ಲಿ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ ಸ್ಥಾನಮಾನದ ಬಗ್ಗೆ ಸಮಗ್ರ ಚಿಂತನ ಚರ್ಚೆ ನಿರ್ಣಯಗಳ ಸಭೆ ನಡೆಯಲಿದೆ ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳದ ರಾಜ್ಯಾಧ್ಯಕ್ಷರಾದ ಸಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಸೆ. 27ರ ಶನಿವಾರ ಬೆಳಿಗ್ಗೆ 10.30ರಿಂದ ಸಂಜೆ 5ವರೆಗೆ ನಡೆಯುವ ಈ ಸಭೆಯ ಸಾನಿಧ್ಯವನ್ನು ಬ್ರಹ್ಮ ಶ್ರೀ ನಾರಾಯಣಗುರುಪೀಠದ ಪೀಠಾಧಿಪತಿಗಳಾದ ಶ್ರೀ ಪ್ರಣವಾನಂದ ಸ್ವಾಮಿಜಿಯವರು ವಹಿಸಲಿದ್ದಾರೆ. ಇವರೊಂದಿಗೆ ಬಿ.ಕೆ.ಹರಿಪ್ರಸಾದ್, ಲೋಕಸಭಾ ಸದಸ್ಯರಾದ  ಕೋಟ ಶ್ರೀನಿವಾಸ್ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಮಂಚೇಗೌಡ್ರು. ರಾಷ್ಟ್ರೀಯ ಈಡಿಗ ಮಹಾಮಂಡಳಿ ರಾಷ್ಟ್ರೀಯ ಕಾರ್ಯದರ್ಶಿ. ಶಿವಕುಮಾರ್, ರಾಷ್ಟ್ರೀಯ ಈಡಿಗ ಮಹಾಮಂಡಳಿ ರಾಜ್ಯ ಉಪಾಧ್ಯಕ್ಷರು ನಾಗರಾಜ್ ನಾಯಕ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಈಡಿಗ ಸಮುದಾಯದವರು ಭಾಗವಹಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...