ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸರ್ಕಾರಿ ಶಾಲೆಗಳ ಉಳಿವಿಗಾಗಿ ಪಣ ತೊಟ್ಟಿದ್ದಾರೆ. ಅದುವೆ ಬಂಗಾರಪ್ಪ ಅವರ ಕಾಲದಲ್ಲಿ ಶಾಲೆಗಳ ಉಳಿವಿಗಾಗಿ ಸಾಕಷ್ಟು ಶ್ರಮ ಹಾಕಿದ್ದರು. ಇದೀಗ ಮಧು ಬಂಗಾರಪ್ಪ ಅವರು ಕೂಡ ಸರ್ಕಾರಿ ಶಾಲೆ ಉಳಿವಿಗಾಗಿ ಯೋಚಿಸುತ್ತಿದ್ದಾರೆ. ಆ ಕಾಲದಲ್ಲಿ ಅನುದಾನವನ್ನು ನೀಡಿ ಕನ್ನಡ ಶಾಲೆಯನ್ನು ಉಳಿಸುವ ಕೆಲಸವಾಗುತ್ತಿತ್ತು. ಮುಂದೆಯೂ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಉಳಿಸುತ್ತೇವೆ ಎಂದಿದ್ದಾರೆ.
ಇದೇ ವೇಳೆ ಜಾತಿಗಣತಿಗಾಗಿ ಶಿಕ್ಷಕರ ಬಳಕೆಯ ಬಗ್ಗೆ ಮಾತನಾಡಿ, ತಾಂತ್ರಿಕ ಸಮಸ್ಯೆಗಳು ಸ್ವಾಭಾವಿಕವಾಗಿರುತ್ತದೆ. ಆದರೆ ಬ್ಯಾಕಪ್ ವ್ಯವಸ್ಥೆ ಇದೆ. ಸಮೀಕ್ಷೆಯಲ್ಲಿ ಜನರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಸಮೀಕ್ಷೆಗೆ ಶಿಜ್ಷಕರನ್ನು ದಸರಾ ರಜೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಶಿಕ್ಷಕರನ್ನು ಬಳಸದೆ ಬೇರೆ ಪರ್ಯಾಯ ವ್ಯವಸ್ಥೆ ಇಲ್ಲ. ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಆದ್ಯತೆ ಇದೆ. ಇದು ಜಾತಿಗಲಕ ಗಣತಿ ಅಲ್ಲ. ಎಲ್ಲಾ ವರ್ಗದವರಿಗೂ ಸಮಾನತೆ ಕೊಡಲು ಇದು ಅವಶ್ಯಕವಾಗಿದೆ ಎಂದಿದ್ದಾರೆ.

ಶಿಕ್ಷಕರಿಗೆ ಸಮೀಕ್ಷೆ ಚೆನ್ನಾಗಿ ಮಾಡಿಕೊಡಿ, ಸಹಕಾರ ಕೊಡಿ ಅಂತ ಮನವಿ ಮಾಡಿಕೊಂಡಿದ್ದೇವೆ. ಶಿಕ್ಷಕರು ಸಹ ಅವರ ಹಕ್ಕು ಎಂದು ಭಾವಿಸಿ ಸಮೀಕ್ಷೆ ಮಾಡಬೇಕು. ಹತ್ತು ಜನ ನಾವು ಸಮೀಕ್ಷೆ ಮಾಡಲ್ಲ ಅಂದರೆ ಅವರೇ ಅವರ ಹಕ್ಕು ಉಲ್ಲಂಘನೆ ಮಾಡಿದಂತೆ. ಮನೆ ಬಳಿ ಬರುವ ಶಿಕ್ಷಕರಿಗೆ ಜನರೂ ಕೂಡಾ ಸಹಕಾರ ಕೊಡಬೇಕು. ಶಿಕ್ಷಕರಿಗೆ ಅಂತ ದಸರಾ ರಜೆ ಕೆಲ ದಿನ ವಿಸ್ತರಣೆ ಮಾಡುವುದು ಈ ಹಂತದಲ್ಲಿ ಕಷ್ಟ, ದಸರಾ ರಜೆ ವಿಸ್ತರಣೆ ಪ್ರಸ್ತಾಪ ಇಲ್ಲ. ದಸರಾ ರಜೆ ಮುಗಿಯುತ್ತಿದ್ದಂತೆ ಶಾಲೆಗಳು ಆರಂಭ ಆಗುತ್ತವೆ. ಸಮೀಕ್ಷೆಯಲ್ಲಿ ಭಾಗಿಯಾದ ಶಿಕ್ಷಕರಿಗೆ ಪರ್ಯಾಯ ರಜೆ ನೀಡುವ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















