Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇನ್ನಿಲ್ಲ

---Advertisement---

ಬೆಂಗಳೂರು.ಸೆ.24: ನಾಡಿನ ಹೆಸರಾಂತ, ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ (94 ವರ್ಷ) ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು ಇಂದು ಕೊನೆಯುಸಿರೆಳೆದಿದ್ದಾರೆ.

ಭೈರಪ್ಪ ಅವರ ಪೂರ್ಣ ಹೆಸರು ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ. 1931ರ ಆಗಸ್ಟ್ 20ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ಜನಿಸಿದರು. ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು.

ಪ್ರೌಢ ಶಿಕ್ಷಣ ಹಾಗೂ ಕಾಲೇಜು ಶಿಕ್ಷಣವನ್ನು ಮೈಸೂರಿನಲ್ಲಿ ಮುಂದುವರೆಸಿದ ಅವರು ಎಂ.ಎ.ನಲ್ಲಿ ಚಿನ್ನದ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ” ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದರು.

ಶಿಕ್ಷಣ ಮುಗಿಸಿದ ಬಳಿಕ ಹುಬ್ಬಳ್ಳಿ, ಗುಜರಾತಿನ ಸರದಾ‌ರ್ ಪಟೇಲ್ ವಿಶ್ವ ವಿದ್ಯಾಲಯ, ದೆಹಲಿಗಳಲ್ಲಿ ತಮ್ಮ ಉಪನ್ಯಾಸಕ ವೃತ್ತಿ ಕೈಗೊಂಡ ಭೈರಪ್ಪನವರು, ಅದರ ನಡುವೆ ಮಹತ್ವದ ಕಾದಂಬರಿಗಳನ್ನು ರಚಿಸಿದರು. 1961ರಲ್ಲಿ ಧರ್ಮಶ್ರೀ ಕಾದಂಬರಿ ಪ್ರಕಟಿಸಿದರು. ಇದುವರೆಗೆ ನಾಲ್ಕು ದಶಕಗಳಲ್ಲಿ 21 ಕಾದಂಬರಿಗಳನ್ನು ಬರೆದಿದ್ದಾರೆ.

ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ 1966ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975 ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತು. ಪರ್ವ ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು.

1999ರಲ್ಲಿ ಕನಕಪುರಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಭೈರಪ್ಪ ಆಯ್ಕೆಯಾಗಿದ್ದರು. ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now