ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ಜಿ.ಆರ್.ಹಳ್ಳಿ ಹತ್ತಿರವಿರುವ ಜ್ಞಾನಗಂಗೋತ್ರಿ ವಿಶ್ವವಿದ್ಯಾಲಯವನ್ನು ಮೆಡಿಕಲ್ ಕಾಲೇಜಿಗೆ ನೀಡಿ ಬೆಂಗಳೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಗಳ ಹೊಸ ಕಟ್ಟಡಕ್ಕೆ ಜ್ಞಾನಗಂಗೋತ್ರಿ ಸ್ನಾತಕೋತ್ತರ ಕೇಂದ್ರವನ್ನು ಸ್ಥಳಾಂತರಿಸುವಂತೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿ, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗೆ ಮನವಿ ಸಲ್ಲಿಸಿದರು.

ದ್ವಿತೀಯ ಪಿ.ಯು.ಸಿ.ಯಲ್ಲಿ ತೇರ್ಗಡೆಯಾಗುವ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿವಿಧ ವೈದ್ಯಕೀಯ ಶಿಕ್ಷಣ ಕೋರ್ಸ್‍ಗಳನ್ನು ಈ ಸಾಲಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಿ ದಾಖಲಾತಿಗೆ ಅನುಮತಿ ಕೊಡಬೇಕು. ಕೆಲವು ಖಾಸಗಿ ಕಾಲೇಜುಗಳಲ್ಲಿ ಅತಿ ಹೆಚ್ಚು ಶುಲ್ಕ ಪಾವತಿಸಿ ವೈದ್ಯಕೀಯ ಶಿಕ್ಷಣ ಪಡೆಯುವುದು ಬಡ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತದೆ. ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ತೇರ್ಗಡೆಯಾಗುವ ಬಡ ವಿದ್ಯಾರ್ಥಿಗಳು ವೈದ್ಯಕೀಯ ಸಂಬಂಧಿ ಬೇರೆ ಬೇರೆ ಕೋರ್ಸ್‍ಗಳಿಗೆ ದಾಖಲಾತಿ ಪಡೆಯಲು ತುರ್ತಾಗಿ ಬಿಎಸ್ಸಿ. ಅಲೈಡ್ ಹೆಲ್ತ್ ಸೈನ್ಸ್, ಬಿಎಸ್ಸಿ. ಅನಸ್ತೇಶಿಯಾ ಮತ್ತು ಆಪರೇಷನ್ ಥಿಯೇಟರ್ ಟೆಕ್ನಾಲಜಿ, ಇನ್ನಿತರೆ ಕೋರ್ಸ್‍ಗಳನ್ನು ಮಂಜೂರು ಮಾಡುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಜಿಲ್ಲಾಧಿಕಾರಿಯವರಲ್ಲಿ ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಗ್ರಾಮಾಂತರ ಘಟಕದ ಅಧ್ಯಕ್ಷೆ ಕಮಲಮ್ಮ, ಉಪಾಧ್ಯಕ್ಷೆ ರತ್ನಮ್ಮ, ನಗರಾಧ್ಯಕ್ಷ ಅವಿನಾಶ್, ಮುಜಾಹಿದ್, ಜಗದೀಶ್, ಚಂದನ, ಶಶಿಧರ್, ಸುರೇಶ್, ಅಖಿಲೇಶ್, ವಿಜಯಬಾಬು ಇವರುಗಳು ಪ್ರತಿಭಟನೆಯಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















