Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅನ್ಯ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹುನ್ನಾರ : ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್. 25 : ಅನ್ಯ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಹುನ್ನಾರ ನಡೆಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಜಿಲ್ಲಾ ನಾಯಕ ಸಮಾಜದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಮದಕರಿನಾಯಕ ಪ್ರತಿಮೆ ಮುಂಭಾಗದಲ್ಲಿರುವ ವಾಲ್ಮೀಕಿ ಭವನದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಹಿಂದುಳಿದ ವರ್ಗ ಪ್ರವರ್ಗ-1 ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ಪಡೆಯುತ್ತಿದ್ದಾರೆ. ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಯವರಿಗೆ ನಾಯಕ ತಳವಾರರ ಹೆಸರಿನಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿರುವುದನ್ನು ಕೂಡಲೆ ನಿಲ್ಲಿಸಬೇಕು. ನಾಯಕ ತಳವಾರ ಜಾತಿಗೆ ಸೇರಿಲ್ಲದವರು ವಾಮ ಮಾರ್ಗದಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದಿದ್ದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಪ್ರಮಾಣ ಪತ್ರಗಳನ್ನು ನೀಡಿದ ಅಧಿಕಾರಿಗಳು ಹಾಗೂ ಪಡೆದವರ ಮೇಲೆ ಕ್ರಿಮಿನಲ್ ಕೇಸು ದಾಖಲಿಸುವುದು ಸೇರಿದಂತೆ ಹದಿನೈದು ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ ಸಂವಿಧಾನದ ಪರಿಚ್ಚೇದ 341 ಮತ್ತು 342 ರಡಿ ಸಾಮಾಜಿಕ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ರಾಜಕೀಯವಾಗಿ 1950 ಮತ್ತು ನಂತರ ಹೊರಡಿಸಿರುವ ಅಧಿಸೂಚನೆಗಳಡಿ ಮೀಸಲಾತಿ ನೀಡಿರುವುದು ಸರಿಯಷ್ಟೆ. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿದ್ದರೂ ಪರಿಶಿಷ್ಟ ಪಂಗಡದವರ ಮೇಲೆ ನಿರಂತರ ಶೋಷಣೆ, ದಬ್ಬಾಳಿಕೆ, ದೌರ್ಜನ್ಯಗಳು ನಡೆಯುತ್ತಿರುವುದು ಸಾಲದೆಂಬಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಜಾತಿಯವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ನಮ್ಮ ಸವಲತ್ತುಗಳನ್ನು ಕಸಿಯುವ ಹುನ್ನಾರ ನಡೆಸುತ್ತಿರುವುದನ್ನು ನಾವುಗಳು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರಿಶಿಷ್ಟ ಪಂಗಡಗಳ ಯೋಜನೆಗಳ ಯಶಸ್ವಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ಒಂದು ವರ್ಷದಿಂದ ಮೇಲ್ಪಟ್ಟು ಪರಿಶಿಷ್ಟ ವರ್ಗಗಳ ಇಲಾಖೆಗೆ ಸಚಿವರಿಲ್ಲದಂತಾಗಿದೆ. ಕೂಡಲೆ ಪರಿಶಿಷ್ಟ ವರ್ಗಗಳ ಇಲಾಖೆಗೆ ಕ್ಯಾಬಿನೆಟ್ ಸಚಿವರ ನೇಮಕವಾಗಬೇಕು. ತಳವಾರ ಹೆಸರಿನಲ್ಲಿ ಕೋಳಿ, ಕಬ್ಬಲಿಗ, ಬೆಸ್ತಾ ಸಮುದಾಯದವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಎಸ್.ಟಿ. ಎಸ್ಸಿ. ಓಬಿಸಿ. ಕಾಯಿದೆ ಕಲಂ 4 ಮತ್ತು 4 ಎ ರಲ್ಲಿ  ತಹಶೀಲ್ದಾರ್ ಮತ್ತು ಮೇಲಧಿಕಾರಿಗಳಿಗೆ ರದ್ದುಪಡಿಸುವ ಅಧಿಕಾರವಿದೆ. ಕಾಲೇಜು ಶಿಕ್ಷಣ ಮತ್ತು ಉನ್ನತ ಶಿಕ್ಷಣ ಪಡೆಯುತ್ತಿರುವ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಬಿಡುಗಡೆಗೊಳಿಸಬೇಕು. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಿ ಪರಿಶಿಷ್ಟ ಪಂಗಡದ ವಾಲ್ಮೀಕಿ ನಾಯಕ ಜನಾಂಗದ ಸಾಂಸ್ಕøತಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ರಾಜಕೀಯ ವಿಚಾರಗಳ ಬಗ್ಗೆ ಅಧ್ಯಯನ ನಡೆಸಲು ವಿಶೇಷ ಅನುದಾನ ಮಂಜೂರು ಮಾಡುವಂತೆ ಆಗ್ರಹಿಸಿದರು.

ಲಿಂಗವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ರೈಲ್ವೆಸ್ಟೇಷನ್ ಮಂಜುನಾಥ್, ಬಾಲೇನಹಳ್ಳಿ ತಿಪ್ಪೇಸ್ವಾಮಿ, ಮಂಜುನಾಥ್, ನ್ಯಾಯವಾದಿಗಳಾದ ಬ್ಯಾಲಾಳ್ ಸಿದ್ದೇಶ್, ಅಶೋಕ್‍ಬೆಳಗಟ್ಟ, ನಗರಸಭೆ ಸದಸ್ಯ ದೀಪು, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಪ್ರಶಾಂತ್, ಮಹಿಳಾ ಮುಖಂಡರುಗಳಾದ ರತ್ನಮ್ಮ, ಸುಮಿತ್ರಮ್ಮ, ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now