Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಯಾರು..? ಹೈಕಮಾಂಡ್ ಮಿಸ್ಟೇಕ್ ಗೆ ರಾಜು ಕಾಗೆ ಶಾಕ್..!

ರಾಜು ಕಾಗೆ
---Advertisement---

ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ಹೈಕಮಾಂಡ್ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನ ನೇಮಕ ಮಾಡಿ, ಆದೇಶ ಹೊರಡಿಸಿತ್ತು. ಆ ಆದೇಶದಲ್ಲಿ ಆದ ಮಿಸ್ಟೇಕ್ ನಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಯಾರು..? ಎಂಬ ಪ್ರಶ್ನೆ ಕಾಡುವುದಕ್ಕೆ ಶುರುವಾಗಿದೆ. ಈ ನಿಗಮಕ್ಕೆ ಹಾಲಿ ಅಧ್ಯಕ್ಷರಾಗಿ ರಾಜು ಕಾಗೆ ಇದ್ದಾರೆ. ಆದ್ರೆ ಎಐಸಿಸಿ ಹೊರಡಿಸಿರುವ ಆದೇಶದಲ್ಲಿ ಬೇರೆಯವರ ಹೆಸರು ಬಂದಿದೆ. ಅರುಣ್ ಪಾಟೀಲ್ ಅವರ ಹೆಸರನ್ನ ಉಲ್ಲೇಖ ಮಾಡಲಾಗಿದೆ.

ಈ ಸಂಬಂಧ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರನ್ನು ರಾಜು ಕಾಗೆ ಭೇಟಿಯಾಗಿದ್ದಾರೆ. ಅಧ್ಯಕ್ಷ ಸ್ಥಾನದ ಆದೇಶದಲ್ಲಿ ಆಗಿರುವ ಗೊಂದಲದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಧೈರ್ಯ ತುಂಬಿದ್ದಾರೆ. ಅದು ಕೇವಲ ಪ್ರಿಂಟಿಂಗ್ ಮಿಸ್ಟೇಕ್. ನೀನೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂದು ಹೇಳಿ ಕಳುಹಿಸಿದ್ದಾರೆ.

ಸರ್ಕಾರಕ್ಕೆ ಮುಜುಗರ ಆಗುವಂತೆ ಹೇಳಿಕೆ ನೀಡಿದ್ದ ಕಾರಣ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಶಾಸಕ ರಾಜು ಕಾಗೆ ಅವರುಗೆ ಗೇಟ್ ಪಾಸ್ ನೀಎಲಾಗಿದೆ. ತೆರವಾದ ಹುದ್ದೆ ಗೆ ಅರುಣ್ ಪಾಡೀಲ್ ನೇಮಕಕ್ಕೆ ಹೈಕಮಾಂಡ್ ನಿರ್ಧರಿಸಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲರಿಂದ ಈ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ರವಾನೆ ಮಾಡಲಾಗಿದೆ. ಈ ಮೂಲಕ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಪ್ರಬಲ ಸಂದೇಶ ರವಾನಿಸಿರುವ ಬಗ್ಗೆ ಸುದ್ದಿ ಹರಿದಾಡಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now