Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

68 ಗಣತಿದಾರರಿಗೆ ನೋಟಿಸ್-ಶಿಸ್ತು ಕ್ರಮ : ಡಿಸಿ ವೆಂಕಟೇಶ್

---Advertisement---

 

ಚಿತ್ರದುರ್ಗ, ಸೆ.28 : ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆ. 22 ರಿಂದ ಪ್ರಾರಂಭಿಸಿದ್ದು, ಗಣತಿ ಕಾರ್ಯಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಆದರೆ ಚಿತ್ರದುರ್ಗ ತಾಲ್ಲೂಕಿನಲ್ಲಿ ಇದುವರೆಗೂ ಗಣತಿ ಕಾರ್ಯಕ್ಕೆ ವರದಿ ಮಾಡಿಕೊಳ್ಳದಿರುವ 68 ಗಣತಿದಾರರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಶಿಸ್ತು ಕ್ರಮಕ್ಕೂ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳು ಕೂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು, ಗೈರು ಮತ್ತು ನಿರ್ಲಕ್ಷ್ಯೊ ತೋರುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಸಮೀಕ್ಷಾ ಕರ್ತವ್ಯಕ್ಕೆ ಗೈರಾದ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದಾಗ್ಯೂ ಚಿತ್ರದುರ್ಗ ತಾಲ್ಲೂಕಿನಲ್ಲಿಯೇ ಸುಮಾರು 68 ಗಣತಿದಾರರು, ಸಮೀಕ್ಷಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೀಗಾಗಿ ಈ ಎಲ್ಲ 68 ಗಣತಿದಾರರಿಗೂ ನೋಟಿಸ್ ಜಾರಿಗೊಳಿಸಲಾಗಿದ್ದು, ಶಿಸ್ತು ಕ್ರಮಕ್ಕೂ ಪ್ರಕ್ರಿಯೆ ಆರಂಭಿಸಲಾಗಿದೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಇಲ್ಲಸಲ್ಲದ ನೆಪವೊಡ್ಡಿ, ಗೈರು ಹಾಜರಾದಲ್ಲಿ ಅಥವಾ ನಿರ್ಲಕ್ಷö್ಯ ತೋರಿದಲ್ಲಿ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಅಂತಹವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಎಚ್ಚರಿಕೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...