ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಸೆ. 29 : ವೀರಶೈವ ಲಿಂಗಾಯತ ಸಮಾಜ ಬಾಂಧವರಲ್ಲಿ ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ (ಜಾತಿ ಗಣತಿ) ಸಮೀಕ್ಷೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯದ ಮೇರೆಗೆ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ(ಜಾತಿ ಗಣತಿ) ಯಲ್ಲಿ ಧರ್ಮದ ಕಾಲಂನಲ್ಲಿ”ವೀರಶೈವ ಲಿಂಗಾಯತ”,ಜಾತಿ ಕಾಲಂನಲ್ಲಿ ಲಿಂಗಾಯತ ಅಥವಾ ವೀರಶೈವ ಅಂತಾ ಬರಿಸಿ ಉಪಜಾತಿ ಕಾಲಂನಲ್ಲಿ ನಿಮ್ಮ ನಿಮ್ಮ ಉಪಜಾತಿಗಳ ಹೆಸರನ್ನು ಬರೆಸಿ ಅಲಕ್ಷ ಮಾಡಬೇಡಿ ಎಂದು ಅಖಿಲ ಭಾರತ ವೀರಶೈವ ಮಹಾ ಸಭಾದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಮಹಡಿ ಶಿವಮೂರ್ತಿ ಸಮಾಜ ಬಾಂಧವರಲ್ಲಿ ಮನವಿ ಮಾಡಿದ್ದಾರೆ.
ಎರಡನೇ ಬಾರಿ ಸಮೀಕ್ಷೆ ನಡೆದಿರುವುದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪನವರ ಮತ್ತು ಪದಾಧಿಕಾರಿಗಳ ಒತ್ತಾಯದ ಮೇರೆಗೆ ಈ ಹಿನ್ನಲೆಯಲ್ಲಿ ಸಮಾಜ ಬಂದುಗಳೇ ಈ ರೀತಿಯಾಗಿ ಬರೆಸಿದಾಗ ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಎಷ್ಟು ಇದೆ ಅನ್ನುವುದು ನಿಖರವಾಗಿ ಗೊತ್ತಾಗುವುದು ಮತ್ತು ಆರ್ಥಿಕ ಸ್ಥಿತಿಗತಿ ಬಗ್ಗೆಯೂ ಗೊತ್ತಾಗುತ್ತದೆ ಇದನ್ನು ಅಲಕ್ಷ ಮಾಡಬೇಡಿ ಸಮಾಜ ಬಂಧುಗಳಲ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















