ಬಿಜೆಪಿಗಿಂತ ನಿಮ್ಮ ಸರ್ಕಾರದಲ್ಲಿಯೆ ಕಮಿಷನ್ ಜಾಸ್ತಿ : ಸಿದ್ದರಾಮಯ್ಯರಿಗೆ ಪತ್ರ

1 Min Read

ಬೆಂಗಳೂರು: ಬಿಜೆಪಿ ಸರ್ಕಾರವಿದ್ದಾಗ 40% ಕಮಿಷನ್ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್ ನವರೇ ಅದರ ವಿರುದ್ಧ ಹೋರಾಟ ಮಾಡಿದ್ದರು. ಇದೀಗ ಬಿಜೆಪಿ ಸರ್ಕಾರಕ್ಕಿಂತ ನಿಮ್ಮ ಕಾಂಗ್ರೆಸ್ ಸರ್ಕಾರದಲ್ಲಿಯೇ ಹೆಚ್ಚಿನ ಕಮಿಷನ್ ದಂಧೆ ಇದೆ ಅಂತ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. ಗುತ್ತಿಗೆದಾರರ ಸಂಘ ಈ ಪತ್ರವನ್ನ ಬರೆದಿದಿದೆ.

 

ತಾವೂ ವಿರೋಧ ಪಕ್ಷದ ನಾಯಕರಾಗಿದ್ದಾಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಯಾವುದೇ ಕಮಿಷನ್ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದೀರಿ. ಆದರೆ ಹಿಂದಿನ ಸರ್ಕಾರಕ್ಕಿಂತ ಎಲ್ಲಾ ಇಲಾಖೆಗಳಲ್ಲೂ ಈಗ ಕಮಿಷನ್ ದುಪ್ಪಟ್ಟು ಆಗಿದೆ. ಇದನ್ನ ನಿಮ್ಮ ಗಮನಕ್ಕೆ ತರುವುದಕ್ಕೆ ಗುತ್ತಿಗೆದಾರರ ಸಂಘವೂ ವಿಷಾಧ ವ್ಯಕ್ತಪಡಿಸುತ್ತದೆ ಎಂದು ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

ಕಾಮಗಾರಿಯ ಕೈಗೊಳ್ಳುವ ಎಂಟು ಇಲಾಖೆಗಳಿಂದ ಹಣ ಬಂದಿಲ್ಲ. ರಾಜ್ಯ ಗುತ್ತಿಗೆದಾರ ಸಂಘಕ್ಕೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಿಲ್ಲ. ಆದಷ್ಟು ಬೇಗ ಗುತ್ತಿಗೆದಾರರ ಹಣವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರ ಒಟ್ಟು 33 ಸಾವಿರ ಕೋಟಿ ಹಣವನ್ನು ಉಳಿಸಿಕೊಂಡಿದೆ. ಹಿಂದಿನ ಸರ್ಕಾರಕ್ಕಿಂತ ಈ ಸರ್ಕಾರದಲ್ಲಿಯೇ ಕಮಿಷನ್ ದುಪ್ಪಟ್ಟಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಆಕ್ರೋಶ ಹೊರ ಹಾಕಿದೆ. ಎರೆಉ ವರ್ಷಗಳಿಂದಲೂ ಇದೇ ಸಮಸ್ಯೆ ಇದೆ. ಮೊದಲು ಬಾಕಿ ಹಣವನ್ನು ಬಿಡುಗಡೆ ಮಾಡಿ. ಸರ್ಕಾರದಿಂದ ನಮಗೆ ಯಾವುದೇ ಪ್ರಯೋಜನವಿಲ್ಲ. ಬಾಕಿ ಹಣಕ್ಕಾಗಿ ಅನೇಕ ಸುತ್ತಿನ ಸಭೆಗಳು ನಡೆದಿವೆ. ಆದರೆ ಪ್ರಯೋಜನವಿಲ್ಲ ಎಂದು ಪತ್ರದ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

Share This Article
Enable Notifications OK No thanks