ಬೆಂಗಳೂರು: ಎಲ್ಲಾ ನೇಮಕಾತಿಗಳಲ್ಲೂ ವಯೋಮಿತಿ ಸಡಿಲಿಕೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಉದ್ಯೋಗಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಎಲ್ಲಾ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ವಯೋಮಿತಿ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ವಾರವಷ್ಟೇ ಧಾರವಾಡದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ವಯೋಮಿತಿ ಸಡಿಲಿಕೆ ಮಾಡುವಂತೆ ಆಗ್ರಹಿಸಿದ್ದರು. ಯಾಕಂದ್ರೆ ಸರ್ಕಾರಿ ಉದ್ಯೋಗ ಪಡೆಯಬೇಕು ಅಂತ ಕಾಯುತ್ತಿರುವವರ ಸಂಖ್ಯೆ ಸಾಕಷ್ಟಿದೆ. ಅದಕ್ಕಾಗಿ ಹಗಲು ರಾತ್ರಿಯೆನ್ನದೆ ಓದುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಹಲವು ವರ್ಷಗಳಿಂದ ನೇಮಕ ಮಾಡದೆ ಸತಾಯಿಸುತ್ತಿದೆ. ಇದರಿಂದ ಸಹಜವಾಗಿಯೇ ನಮ್ಮ ವಯಸ್ಸು ಹೆಚ್ಚಾಗುತ್ತಿದೆ. ವಯಸ್ಸು ಹೆಚ್ಚಾದರೆ ಮುಂದೆ ಪರೀಕ್ಷೆ ಬರೆಯುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಸರ್ಕಾರದ ಉದ್ಯೋಗ ಸಂಬಂಧ ನಡೆಸುವ ಎಲ್ಲಾ ಪರೀಕ್ಷೆಗಳ ವಯೋಮಿತಿ ಸಡಿಲಿಕೆ ಮಾಡುವಂತೆ ಆಗ್ರಹ ಮಾಡಿದ್ದರು. ಇದೀಗ ವಿದ್ಯಾರ್ಥಿಗಳ ಹೋರಾಟಕ್ಕೆ ಫಲ ಸಿಕ್ಕಂತೆ ಆಗಿದೆ. ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ/ಎಸ್ಟಿ, ಪ್ರವರ್ಗ -1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ಇದೆ. ಇದರ ಮೇಲೆ ಒಂದು ಬಾರಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 31, 2027 ರವರೆಗೆ ನಡೆಯುವ ನೇಮಕಾತಿಗಳಿಗೆ ಈ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ಈ ಮೂಲಕ ಸರ್ಕಾರಿ ಕೆಲಸಕ್ಕಾಗಿ ಬಹಳಷ್ಟು ವರ್ಷಗಳಿಂದ ಕಾಯುತ್ತಿರುವವರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















