Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಗೇಂದ್ರ ಅವರು ಮತ್ತೆ ಸಂಪುಟಕ್ಕೆ : ಪರಮೇಶ್ವರ್ ಹೇಳಿದ್ದೇನು..?

ಸಚಿವ ಪರಮೇಶ್ವರ್
---Advertisement---

 

ಬೆಂಗಳೂರು: ವಾಲ್ಮೀಕಿ ಹಗರದಲ್ಲಿ ಸಚಿವರಾಗಿದ್ದ ಬಿ ನಾಗೇಂದ್ರ ಅವರು ರಾಜೀನಾಮೆ ಕೊಡುವಂತೆ ಆಯ್ತು. ಮತ್ತೆ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ. ಈ ಸಂಬಂಧ ಜಮೀರ್ ಅಹ್ಮದ್ ಕೂಡ ಮಾತನಾಡಿದ್ದರು. ಈ ಸಂಬಂಧ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿರುವಂಥದ್ದು. ಸಾಮಾನ್ಯವಾಗಿ ಸಂಪುಟ ವಿಸ್ತಾರಣೆಯಾಗಿ, ಪುನರ್ ರಚನೆಯಾಗಲಿ ಇದೆಲ್ಲವು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು. ನಮಗೆ ಯಾರಿಗೂ ಗೊತ್ತಾಗುವುದಿಲ್ಲ. ಯಾರಿಗೂ ಅದನ್ನ ಹೇಳುವುದು ಇಲ್ಲ. ಕೆಲವರು ಆ ಬಗ್ಗೆ ಹೇಳಿದರೆ ಅದು ಅವರವರ ವೈಯಕ್ತಿಕ ಅಭಿಪ್ರಾಯವೇ ಆಗಿರುತ್ತದೆ. ನಾನು ಮೊದಲಿನಿಂದಲೂ ಹೇಳಿಕೊಂಡು ಬಂದಿರುವುದು ನಮಗೆ ಅದೆಲ್ಲ ಗೊತ್ತೆ ಇಲ್ಲ. ಎರಡೂವರೆ ಎರಡೂವರೆ ಅಂತ ಹೇಳೋದು ನಮಗೆ ಗೊತ್ತಿಲ್ಲ. ಹೈಕಮಾಂಡ್ ಆಗಲಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಹೇಳಿಲ್ಲ, ನಮ್ಮ ಸಾಹೇಬ್ರು ಶಿವಕುಮಾರ್ ಅವರು ಹೇಳಿಲ್ಲ. ಒಳಗೊಳಗೆ ಅವರು ಯಾವ ಹೊಂದಾಣಿಕೆಗೆ ಬಂದಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ.

ಇದೇ ವೇಳೆ ನಿಗಮ ಮಂಡಳಿಯ ಅದಲು ಬದಲು ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿಗಳು ಹಾಗೂ ಪಕ್ಷದ ಅಧ್ಯಕ್ಷರು ಕೂತು ಈ ಬಗ್ಗೆ ಚರ್ಚೆ ಮಾಡಿ, ಫೈನಲ್ ಮಾಡಿ, ಹೈಕಮಾಂಡ್ ಗಮನಕ್ಕೆ ತಂದು ಮಾಡ್ತಾರೆ. ನಾನು ಅಧ್ಯಕ್ಷನಾಗಿದ್ದಾಗಲೂ ಇದನ್ನೇ ಮಾಡ್ತಾ ಇದ್ದೆವು. ಬದಲಾಯಿಸಿದ್ದಾರೆ ಅಂತ ಕೇಳಿದ್ದೇನೆ. ನಾವು ಇದ್ದಾಗಲೂ ಹೇಗೆ ನಡೆಯುತ್ತಿತ್ತೋ ಅದೇ ರೀತಿ ಆಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now