Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ

---Advertisement---

 

 

ಚಿತ್ರದುರ್ಗ.ಸೆ.30: ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಪ್ರಕಟಿಸಿದೆ.

 

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.

ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.

ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತು.
ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.

ಆದರೆ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು. ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು* ತೀರ್ಮಾನಿಸಿ, ದಿನಾಂಕ: 06.09.2025ರ ಆದೇಶದ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31-12-2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure)  3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now