Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಆರ್.ಕೆ.ಸರ್ದಾರ್ ಗೆ ನಿಗಮ ಮಂಡಳಿಯಲ್ಲಿ ಕೈತಪ್ಪಿದ ಅವಕಾಶ : ಬೆಂಬಲಿಗರಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 30 : ಕಳೆದ 38 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್‍ಗೆ ನಿಗಮ ಮಂಡಳಿಯಲ್ಲಿ ಸ್ಥಾನಮಾನ ನೀಡದೆ ದ್ರೋಹವೆಸಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆಯನ್ನು ವಿರೋಧಿಸಿ ಎಲ್ಲಾ ಜಾತಿ ವರ್ಗದ ಅವರ ಅಪಾರ ಅಭಿಮಾನಿಗಳು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಆರ್.ಕೆ.ಸರ್ದಾರ್ ಅಭಿಮಾನಿಗಳು ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

 

ಮಧ್ಯ ಕರ್ನಾಟಕದ ಅಲ್ಪಸಂಖ್ಯಾತ ನಾಯಕ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿ ಆರ್.ಕೆ.ಸರ್ದಾರ್‍ಗೆ 2013-15 ರಲ್ಲಿ ನಡೆದ ಚುನಾವಣೆಯಲ್ಲಿ ಟಿಕೇಟ್ ನೀಡದೆ ವಂಚಿಸಲಾಯಿತು. ಸಿದ್ದರಾಮಯ್ಯನವರು ಚಿತ್ರದುರ್ಗಕ್ಕೆ ಆಗಮಿಸಿದ್ದಾಗ ಆರ್.ಕೆ.ಸರ್ದಾರ್‍ರವರಿಗೆ ಟಿಕೇಟ್ ನೀಡುವುದಾಗಿ ನಂಬಿಸಿ ಕೈಕೊಟ್ಟಿರುವುದನ್ನು ನಾವುಗಳು ಸಹಿಸುವುದಿಲ್ಲ. ಮುಂದೆ ನಡೆಯುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕಿದೆ ಎನ್ನುವುದನ್ನು ಪಕ್ಷದ ನಾಯಕರುಗಳು ಮನದಲ್ಲಿಟ್ಟುಕೊಳ್ಳಬೇಕು. ಅಲ್ಪಸಂಖ್ಯಾತರನ್ನು ಕೇವಲ ಮತ ಬ್ಯಾಂಕನ್ನಾಗಿ ಮಾಡಿಕೊಂಡರೆ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಸಿ.ಆರ್.ಅಬ್ದುಲ್ ಖಯೂಂ ಮಾತನಾಡಿ ಪಕ್ಷದಲ್ಲಿ ಯಾವುದೇ ಅಧಿಕಾರ ಸ್ಥಾನಮಾನ ಸಿಗದಿದ್ದರೂ ಎಂದಿಗೂ ಪಕ್ಷಕ್ಕೆ ದ್ರೋಹ ಮಾಡದೆ ನಿಷ್ಟಾವಂತರಾಗಿ ಇಂದಿಗೂ ಉಳಿದುಕೊಂಡಿರುವ ಅಲ್ಪಸಂಖ್ಯಾತರ ನಾಯಕ ಆರ್.ಕೆ.ಸರ್ದಾರ್‍ರವರಿಗೆ ರಾಜ್ಯ ಮಟ್ಟದ ಉನ್ನತ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಗಂಭೀರವಾಗಿ ಚಿಂತಿಸಬೇಕು. ಇಲ್ಲವಾದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆಂದು ಎಚ್ಚರಿಸಿದರು.

ನಿವೃತ್ತ ಡಿ.ವೈ.ಎಸ್ಪಿ. ಅಬ್ದುಲ್‍ರೆಹಮಾನ್, ಯಾಸಿನ್, ಮೆಹಬೂಬ್‍ಖಾನ್, ಜಿಲ್ಲಾ ಕಾಂಗ್ರೆಸ್ ರೈತ ಸಂಘದ ಶಿವಲಿಂಗಪ್ಪ, ಆರ್.ಕೆ.ನಯಾಜ್, ದಾದಾಪೀರ್, ರಘು ಧನಂಜಯ, ಪ್ರಕಾಶ್, ಶ್ರೀನಿವಾಸ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...