ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 30 : ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.7 ರಂದು ಅದ್ದೂರಿಯಾಗಿ ಆಚರಿಸುವ ಸಂಬಂಧ ಜಿಲ್ಲಾ ನಾಯಕ ಸಮಾಜದಿಂದ ವಾಲ್ಮೀಕಿ ಭವನದ ಮುಂಭಾಗ ಮಂಗಳವಾರ ಪೋಸ್ಟರ್‍ಗಳನ್ನು ಬಿಡುಗಡೆಗೊಳಿಸಲಾಯಿತು.
ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಅಂದು ಬೆಳಿಗ್ಗೆ ಹತ್ತು ಗಂಟೆಗೆ ಕೋಟೆ ಮುಂಭಾಗದಿಂದ ಮೆರವಣಿಗೆ ಹೊರಟು ವಾಲ್ಮೀಕಿ ಭವನ ತಲುಪಲಿದೆ. ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ನಾಯಕ ಸಮಾಜದವರು ಹಾಗೂ ಸೋದರ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮನವಿ ಮಾಡಿದರು.
ನಗರಸಭೆ ಮಾಜಿ ಸದಸ್ಯ ಎ.ತಿಪ್ಪೇಸ್ವಾಮಿ, ಬಿ.ಮಂಜುನಾಥ, ಸೊಂಡೆಕೊಳ ಶ್ರೀನಿವಾಸ್, ನಿವೃತ್ತ ಪ್ರಾಂಶುಪಾಲರಾದ ಗುಡ್ಡದೇಶ್ವರಪ್ಪ, ಸಿ.ಜಿ.ಶ್ರೀನಿವಾಸ್, ಮಂಜುನಾಥ
ಬಸವರಾಜ ಬಚ್ಚಬೋರನಹಟ್ಟಿ, ನ್ಯಾಯವಾದಿ ಅಶೋಕ್‍ಬೆಳಗಟ್ಟ, ಬೋರೇಶ್, ಸುರೇಶ್ ಗೋನೂರು, ಪ್ರಶಾಂತ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















