Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನೆರವೇರಿದ ವಿಷ ಜಂತುಗಳ ಪರಿಹಾರಕನ ಅಂಬಿನೋತ್ಸವ

---Advertisement---

ಸುದ್ದಿಒನ್, ಹಿರಿಯೂರು : ತಾಲೂಕಿನ ವಾಣಿ ವಿಲಾಸ ಸಾಗರ ಜಲಾಶಯದ ಹಿನ್ನೀರಿನ ದಡದಲ್ಲಿರುವ ಬುಡಕಟ್ಟು ಕಾಡುಗೊಲ್ಲರ ಆರಾಧ್ಯ ದೈವ ಹಾರನಕಣಿವೆ ಶ್ರೀ ರಂಗನಾಥಸ್ವಾಮಿಯ ಅಂಬಿನೋತ್ಸವ ಹಾಗೂ ಹಾವು, ಚೇಳುಗಳ ಅರ್ಪಿಸುವ ಹರಕೆಯ ಜಾತ್ರೆಯು ಅಂಚಿಬಾರಿಹಟ್ಟಿ ಹಾಗೂ ಕಕ್ಕಯ್ಯನಹಟ್ಟಿ ಗ್ರಾಮಸ್ಥರ ನೇತೃತ್ವದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ 12ಗಂಟೆ ಸಮಯದಲ್ಲಿ ಸಂಭ್ರಮ ಸಡಗರದಿಂದ ನೇರವೇರಿತು.

ಹಿರಿಯೂರು ಹಾಗೂ ಹೊಸದುರ್ಗ ತಾಲೂಕಿನ ಗಡಿಭಾಗದಲ್ಲಿ ಹರಿಹರರು ನೆಲೆಸಿದ್ದ ಪ್ರಮುಖ ಕ್ಷೇತ್ರವೆಂದು ಕರೆಯುವ ಹಾರನಕಣಿವೆ ಕ್ಷೇತ್ರದ ಅಪಾರ ಮಹಿಮೆ ಹಾಗೂ ಭಕ್ತರನ್ನು ಹೊಂದಿರುವ ಪುಣ್ಯ ಕ್ಷೇತ್ರವಾಗಿದ್ದು, ಶ್ರೀ ರಂಗನಾಥಸ್ವಾಮಿಯ ದಸರಾ ಪ್ರಯುಕ್ತ ಅಂಬಿನೋತ್ಸವ ಹಾಗೂ ವಿಶೇಷ ಪೂಜೆಗಳು ನಡೆದವು.

ಹೊಸದುರ್ಗ ತಾಲೂಕಿನ ಅಂಚಿಬಾರಿಹಟ್ಟಿ ಗ್ರಾಮದಲ್ಲಿರುವ ಶ್ರೀ ರಂಗನಾಥಸ್ವಾಮಿಯ ಉತ್ಸವ ಮೂರ್ತಿಗೆ ವಿಶೇಷಪೂಜೆ ಸಲ್ಲಿಸಿದ ಬಳಿಕ ವಾಣಿವಿಲಾಸ ಸಾಗರ ಜಲಾಶಯದಲ್ಲಿ ಸ್ವಾಮಿಗೆ ಗಂಗಾಪೂಜೆ ಹಾಗೂ ಕುದುರೆ ಪೂಜೆ ಕಾರ್ಯ ನೆರವೇರಿಸಲಾಯಿತು. ಬಳಿಕ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆಯೊಂದಿಗೆ ಗುಡಿ ಗೌಡ, ಪೂಜಾರಿ, ಗ್ರಾಮದ ಅಣ್ಣ-ತಮ್ಮಂದಿರು ಹಾಗೂ ಭಕ್ತರ ನೇತೃತ್ವದಲ್ಲಿ ಅದ್ದೂರಿಯಾಗಿ ಹಾರನಕಣಿವೆ ಕ್ಷೇತ್ರಕ್ಕೆ ಕರೆತಂದು ಶಿವ ಹಾಗೂ ವಿಷ್ಣುವಿಗೆ ಮೊದಲ ಪೂಜೆ ಸಲ್ಲಿಸಿದ, ನಂತರ ಜಂಬೂ ಮರದ ಮುಂದೆ ನೆಟ್ಟಿದ್ದ ಬಾಳೆ ಗಿಡಕ್ಕೆ ಪೂಜಾರಿಯು ಮೂರು ಬಾರಿ ಪ್ರದಕ್ಷಿಣೆ ಹಾಕಿ, ಬಿಲ್ಲು ಹಿಡಿದು ಬಾಣ ಹೊಡೆದು, ಬಾಳೆಗಿಡ ಕಡಿಯುವ ಮೂಲಕ ಅಂಬಿನೋತ್ಸವ ಕಾರ್ಯ ನೇರವೇರಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್, ಹೊಸದುರ್ಗ ಶಾಸಕ ಬಿಜಿ ಗೋವಿಂದಪ್ಪ, ಶಿಮುಲ್ ನಿರ್ದೇಕ ಬಿಸಿ. ಸಂಜೀವಮೂರ್ತಿ, ಹಾರನಕಣಿವೆ ಶ್ರೀ ರಂಗನಾಥ ಸ್ವಾಮಿ ಟ್ರಸ್ಟ್ ಅಧ್ಯಕ್ಷ ಡಾ. ಆರ್. ರಂಗನಾಥ್, ಬಿಜೆಪಿ ತಾಲೂಕು ಅಧ್ಯಕ್ಷ ಕೆ ಅಭಿನಂದನ್, ಬಿಜೆಪಿ ಮುಖಂಡ ಎನ್ ಆರ್ ಲಕ್ಷ್ಮೀಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಈರಲಿಂಗೇಗೌಡ, ಪೂಜಾರ್ ತಿಮ್ಮಣ್ಣ, ಕೆಎನ್. ರಂಗಸ್ವಾಮಿ, ಚಂದ್ರಪ್ಪ, ದಾಸಪ್ಪ, ಜಯಣ್ಣ, ತಿಮ್ಮಣ್ಣ, ಸೊಸೈಟಿ ರಂಗಪ್ಪ, ಪೂಜಾರಿ ಕಾಂತಪ್ಪ, ಮಹಲಿಂಗಪ್ಪ ಸೇರಿದಂತೆ ಲಕ್ಷಾಂತರ ಭಕ್ತರು ಸ್ವಾಮಿಯ ದರ್ಶನ ಪಡೆದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now