Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ಐ ಲವ್ ಮಹಮ್ಮದ್ ಹೊಸದೇನು ಅಲ್ಲ’ : ಯತೀಂದ್ರ ಸಿದ್ದರಾಮಯ್ಯ..!

---Advertisement---

ಗದಗ: ರಾಜ್ಯದಲ್ಲಿ ಸದ್ಯಕ್ಕೆ ಐ ಲವ್ ಮೊಹಮ್ಮದ್ ಗಲಾಟೆ ಜೋರಾಗಿದೆ. ಆದರೆ ಇದರ‌ ನಡುವೆ ಯತೀಂದ್ರ ಸಿದ್ದರಾಮಯ್ಯ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಐ ಲವ್ ಮಹಮ್ಮದ್ ಅನ್ನೋದು ಹೊಸದೇನು ಅಲ್ಲ. ಮೊದಲೆಲ್ಲಾ ಉರ್ದುವಿನಲ್ಲಿ ಹಾಕ್ತಾ ಇದ್ದರು. ಆದರೆ ಓದುವುದಕ್ಕೆ ಬಾರದೆ ಗಲಾಟೆ ಆಗ್ತಾ ಇರಲಿಲ್ಲ ಎಂದರು.

ಇವೆಲ್ಲವೂ ಅನಗತ್ಯ ವಿವಾದಗಳು. ಈಗ ಇಂಗ್ಲಿಷ್ ನಲ್ಲಿ ಹಾಕಿದ್ದಕ್ಕೆ ವಿವಾದ ಮಾಡುತ್ತಿದ್ದಾರೆ. ಪ್ರತಿಯೊಂದು ಧರ್ಮದವರು ತಮ್ಮ ಮಹನೀಯರು, ದೇವರ ಮೆಚ್ಚುಗೆಯ ಬ್ಯಾನರ್ ಹಾಕುವುದರಲ್ಲಿ ತಪ್ಪಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ವರ್ಷಾಂತ್ಯಕ್ಕೆ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿಯುತ್ತಾರೆ ಎಂಬ ಬಿಜೆಪಿಗರು ಹೇಳಿಕೆ ಕುರಿತು, ಪ್ರತಿವರ್ಷ ಹೀಗೆ ಹೇಳ್ತಾನೇ ಇರುತ್ತಾರೆ. ಆದ್ರೆ ಮುಖ್ಯಮಂತ್ರಿಗಳು ಮುಂದುವರೆಯುತ್ತಾರೆ. ಮುಖ್ಯಮಂತ್ರಿ ಸ್ಥಾನ ಯಾವುದೇ ಚರ್ಚೆ ಆಗಿಲ್ಲ ಅಂತ ಸುರ್ಜೇವಾಲ ಅವರು ಸ್ಪಷ್ಟೀಕರಣ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಸಿಎಂ ಇದ್ದಾರೆ ಅವರೇ ಮುಂದುವರೆಯುತ್ತಾರೆ. ಈ ಬಗ್ಗೆ ಸಿಎಂ ಅವರೇ ಹೇಳಿದ್ದಾರೆ. ಮುಂದಿನ 5 ವರ್ಷ ನಾನೇ ಇರುತ್ತೇನೆ. ದಸರಾ ಉದ್ಘಾಟನೆ ಮಾಡುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು. ಬಜೆಟ್‌ನಲ್ಲಿ ಘೋಷಣೆ ಮಾಡಿದ ಭದ್ರಾ ಮೇಲ್ದಂಡೆ ಯೋಜನೆ 5 ಸಾವಿರ ಕೋಟಿ ರೂ. ಕೊಡಲಿಲ್ಲ. ಬಜೆಟ್‌ನಲ್ಲಿ ಪೆರಪೆರಿ ರಿಂಗ್ ರೋಡ್ ಕೊಡುತ್ತೇನೆ ಅಂದ್ರು ಕೊಡಲಿಲ್ಲ. ಕೇಂದ್ರ ಕೊಡದೇ ಇರುವುದನ್ನು ಸಿಎಂ ಕೇಳಿದ್ದು‌ ನ್ಯಾಯಯುತವಾಗಿದೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now