Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧರ್ಮವನ್ನು ಒಡೆಯುವ ದುಸ್ಸಾಹಕ್ಕೆ ಕೈ ಹಾಕಿದ್ದಾರೆ ಸಿದ್ದರಾಮಯ್ಯ : ವಿಜಯೇಂದ್ರ ವಾಗ್ದಾಳಿ

---Advertisement---

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಕೇಳಿ ಬಂದಿದೆ. ಸಿದ್ದರಾಮಯ್ಯ ಸರ್ಕಾರದ ಸಚಿವ ಎಂ.ಬಿ.ಪಾಟೀಲ್ ಅವರೇ ಈ ಬಗ್ಗೆ ಇಂದು ಮಾತನಾಡಿದ್ದಾರೆ. ಈ ಸಂಬಂಧ ಬಿವೈ ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಧರ್ಮವನ್ನು ಒಡೆಯುವ ದುಸ್ಸಾಹಕ್ಕೆ ಕೈ ಹಾಕಿದ್ದಾರೆ ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.

ಈ ಹಿಂದೆ ಕೂಡ ಷಡ್ಯಂತ್ರಕ್ಕೆ ಯಶಸ್ಸು ಸಿಕ್ಕಿಲ್ಲ. ಮುಂದೆಯೂ ಸಿಗುವುದಿಲ್ಲ. ಧರ್ಮವನ್ನು ಒಡೆಯುವ ದುಸ್ಸಾಹಸಕ್ಕೆ ಸಿದ್ದರಾಮಯ್ಯ ಅವರು ಕೈ ಹಾಕಿದ್ದಾರೆ. ಇಂದು ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಮುನ್ನಲೆಗೆ ಬಂದಿದ್ದನ್ನ ನಾನು ಮಾಧ್ಯಮದಲ್ಲಿ ನೋಡಿದೆ. ಪ್ರತ್ಯೇಕ ಧರ್ಮ ಬೇಕು ಅಂತ ಎಲ್ಲೋ ಕೂತು ಅವರು ಹೇಳ್ತಿದ್ದಾರೆ ಅಂದ್ರೆ ಅದರ ಹಿನ್ನೆಲೆ ಏನು ಅಂತ ಜನರಿಗೆ ಅರ್ಥವಾಗುತ್ತದೆ. ಇವತ್ತು ಹಿಂದೂ ಧರ್ಮವನ್ನು ಕೂಡ ರಕ್ಷಣೆ ಮಾಡಿಕೊಳ್ಳಬೇಕಾಗಿದೆ. ಹಿಂದೂ ಧರ್ಮವನ್ನ ಒಡೆಯುವ ಕೆಲಸಕ್ಕೆ ಕೈ ಹಾಕಿರುವುದರ ಕಡೆಗೆ ಗಮನವನ್ನು ಕೊಡಬೇಕಾಗುತ್ತದೆ.

ಸಮಾಜವನ್ನು ಉಳಿಸುವ ಕೆಲಸವೂ ಆಗಬೇಕಿದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಒಕ್ಕಲಿಗರು, ಲಿಂಗಾಯತರು, ಪರಿಶಿಷ್ಟ ಜಾತಿ, ಪಂಗಡದವರಿಗೂ ಕೂಡ ನ್ಯಾಯ ಕೊಡುವಂತಹ ಕೆಲಸ ಆಗಬೇಕಿದೆ. ಆದರೆ ಅದನ್ನು ಬಿಟ್ಟು ಪ್ರತ್ಯೇಕ ಧರ್ಮದ ಕೂಗು ಕೇಳಿಸುತ್ತಿದೆ. ಸಿದ್ದರಾಮಯ್ಯ ಅವರಿಗೆ ಯಾಕಿಷ್ಟೂ ಆತುರ. ಧರ್ಮವನ್ನು ಒಡೆಯುವ ದುಸ್ಸಾಹಕ್ಕೆ ಕೈ ಹಾಕಿದ್ದಾರೆ ಎಂದು ಬಿವೈ ವಿಜಯೇಂದ್ರ ಅವರು ಆಕ್ರೋಶ ಹೊರ ಹಾಕಿದ್ದಾರೆ. ಸಚಿವ ಎಂಬಿ ಪಾಟೀಲ್ ಅವರು ಇಂದು ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now