Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಗ್ ಬಾಸ್ ಶೋ ಸ್ಥಗಿತಗೊಳಿಸುವಂತೆ ಕನ್ನಡಪರ ಸಂಘಟನೆ ಪ್ರತಿಭಟನೆ : ಅರಣ್ಯ ಇಲಾಖೆಯಿಂದ ನೋಟೀಸ್

---Advertisement---

ರಾಮನಗರ: ಬಿಗ್ ಬಾಸ್ ಶೋಗೂ ವಿವಾದಕ್ಕೂ ಕೆಲ ಸೀಸನ್ ಗಳಿಂದ ಅವಿನಾಭಾವ ಸಂಬಂಧ ಎನಿಸುತ್ತದೆ. ಕೆಲ ಸೀಸನ್ ಗಳಿಂದ ಬಿಗ್ ಬಾಸ್ ಆರಂಭವಾದ ಮೇಲೆ ನಿಲ್ಲಿಸಿ ಎಂಬ ಕುಇಗು, ಪ್ರತಿಭಟನೆಗಳು ಹಲವು ಕಾರಣಗಳಿಂದ ನಡೆಯುತ್ತಲೇ ಇರುತ್ತವೆ. ಸೀಸನ್ 12 ಶುರುವಾಗಿ ಎರಡನೇ ವಾರದತ್ತ ಸಾಗುತ್ತಿದೆ. ಈಗ ನೋಡಿದ್ರೆ ಬಿಗ್ ಬಾಸ್ ಸ್ಥಗಿತಗೊಳಿಸಿ ಎಂದು ಕನ್ನಡಪರ ಸಂಘಟನೆಗಳಯ ಪ್ರತಿಭಟನೆ ನಡೆಸುತ್ತಿವೆ.

ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆಯನ್ನ ನಡೆಸಿದೆ. ರಿಯಾಲಿಟಿ ಶೋನ ಕೂಡಲೇ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಅರಣ್ಯ ಇಲಾಖೆ ನೋಟೀಸ್ ಒಂದನ್ನ ನೀಡಿದೆ. ಜಾಲಿವುಡ್ ಸ್ಟುಡಿಯೋ ಹಾಗೂ ಬಿಗ್ ಬಾಸ್ ಮನೆ ಇರುವ ಜಾಗದಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂಬ ಕಾರಣದಿಂದ ನೋಟೀಸ್ ನೀಡಲಾಗಿದೆ. ಸಚಿವ ಈಶ್ವರ್ ಖಂಡ್ರೆ ಅವರು ಕೂಡ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂಬ ಮಾತನ್ನು ಹೇಳಿದ್ದಾರೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟೀಸ್ ಬಿಗ್ ಬಾಸ್ ಸಂಬಂಧಿಸಿದವರಿಗೆ ನೋಟೀಸ್ ನೀಡಿದೆ. ತ್ಯಾಜ್ಯ ವಿಲೇವಾರಿ ಹಾಗೂ ಎಸ್ಟಿಪಿ ನೀರು ಸೂಕ್ತ ನಿರ್ವಹಣೆ ಆಗ್ತಿಲ್ಲ ಎಂದು ನೋಟೀಸ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಈ ಸಂಬಂಧ ರಾಮನಗರ ಡಿಸಿ ಹಾಗೂ ಬೆಸ್ಕಾಂ ಅಧಿಕಾರಿಗಳಿಗೆ KSPCB ಈ ಮೊದಲೇ ಎಚ್ಚರಿಕೆಯನ್ನು ನೀಡಿತ್ತು. ನೀರು ಹಾಗೂ ಕರೆಂಟ್ ಕಟ್ ಮಾಡುವಂತೆ ಒಂದು ತಿಂಗಳ ಹಿಂದೆಯೇ ಸೂಚನೆ ನೀಡಿತ್ತು. ಆದರೂ ವೇಲ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಎಚ್ಚೆತ್ತುಕೊಂಡಿರಲಿಲ್ಲ.‌ ಇದೀಗ ಮತ್ತೆ ನೋಟೀಸ್ ನಿಡೀದೆ. ಈ ಕಡೆ ಪ್ರತಿಭಟನೆಯೂ ನಡೆಯುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now