Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಚಿವರಿಂದ ಮತದಾರರನ್ನು ಅವಮಾನಿಸುವ ಕೆಲಸ : ಕೆ ಅಭಿನಂದನ್

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 07 : ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ನಾನು 31 ಸಾವಿರ ಮತಗಳ ಅಂತರದಿಂದ ಗೆಲುವು ಪಡೆದಿದ್ದೇನೆ, ಆದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 6 ಸಾವಿರ ಮತ ಹೆಚ್ಚು ಪಡೆದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂಬ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರ ಹೇಳಿಕೆ ಕ್ಷೇತ್ರದ ಮತದಾರರನ್ನು ಅವಮಾನಿಸುವ ಕೆಲಸಕ್ಕೆ ಸಚಿವರು ಮುಂದಾಗಿರುವುದು ಸರಿಯಲ್ಲ, ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಕೆ ಅಭಿನಂದನ್ ಆಗ್ರಹಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಕ್ಷೇತ್ರದ ಒಂದೇ ಒಂದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮತಯಾಚಿಸಿಲ್ಲ ಎಂಬುದನ್ನು ಬಿಟ್ಟು ಮೊದಲು ನೀವು ವಿಧಾನಸಭಾ ಚುನಾವಣೆಯಲ್ಲಿ ಎಷ್ಟು ಮನೆ ಮನೆ ಭೇಟಿ ನೀಡಿದ್ದಿರಿ ಎಂಬುದನ್ನು ಸ್ಪಷ್ಟಪಡಿಸಬೇಕು. ಗೋವಿಂದ ಕಾರಜೋಳ ಅವರು ಭೇಟಿ ನೀಡಿದೆ ಇರಬಹುದು ಆದರೆ ಅವರ ಕಾರ್ಯಕರ್ತರು ಹಗಲಿರುಳು ಕೆಲಸ ಮಾಡಿ ಶ್ರಮಿಸಿದ್ದಾರೆ. ರಾಜ್ಯದ ಅನುಭವಿ ರಾಜಕಾರಣಿ ಹಾಗೂ ಉಪಮುಖ್ಯಮಂತ್ರಿಯಾಗಿ, ಜಲಸಂಪನ್ಮೂಲ ಸಚಿವರಾಗಿ ಸಾಕಷ್ಟು ಕೆಲಸ ಮಾಡಿರುವ ದಲಿತ ನಾಯಕನಾಗಿರುವ ಅವರು ವಿವಿ ಸಾಗರ ಜಲಾಶಯದಿಂದ ವೇದಾವತಿ ನದಿ ಮೂಲಕ ಧರ್ಮಪುರ ಕೆರೆಗೆ ನೀರು ತುಂಬಿಸುವ ಯೋಜನೆಯಲ್ಲಿ ಕಾರಜೋಳರ ಕೊಡುಗೆ ಅಪಾರವಾಗಿದೆ. ಇಂತವರು ಚುನಾವಣೆಯಲ್ಲಿ ಪ್ರಚಾರ ಮಾಡದಿದ್ದರು ಜನರು ಮತ ನೀಡುತ್ತಾರೆ ಎಂದು ಸಚಿವರಿಗೆ ತಿರುಗೇಟು ನೀಡಿದರು.

ದೇಶದಲ್ಲಿ ಮೊದಲು ಮತಗಳ್ಳತನ ಮಾಡಿರುವುದು ಕಾಂಗ್ರೆಸ್. 1975ರಲ್ಲಿ ಇಂದಿರಾ ಗಾಂಧಿ ಅವರು ಮತಗಳ್ಳತನ ಮಾಡಿದ್ದಾರೆ. ಮತಗಳ್ಳತನಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್, ಸಚಿವರು, ಎಂಎಲ್ಸಿ ಹಾಗೂ ಮಾಜಿ ಶಾಸಕರಿದ್ದರೂ ಸಹ ತಮ್ಮ ಆಡಳಿತದ ವೈಫಲ್ಯ ಹಾಗೂ ಸರ್ಕಾರದ ವಿರುದ್ಧ ಕ್ಷೇತ್ರದ ಜನತೆ ಒಟ್ಟಾಗಿ, ಹಿಂದೂ ಧರ್ಮ ಕಾಪಾಡುವ ಉದ್ದೇಶ ಹಾಗೂ ದೇಶದ ರಕ್ಷಣೆಗೆಗಾಗಿ ಲೋಕಸಭಾ ಚುನಾವಣೆಯಲ್ಲಿ 6 ಸಾವಿರ ಹೆಚ್ಚು ಮತ ಹಾಕಿದ್ದಾರೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...