Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೆಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು..!

---Advertisement---

 

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ‌. ದೇವೇಗೌಡ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಸದ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವೇಗೌಡ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂಬ ಹಾರೈಕೆ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳದ್ದಾಗಿದೆ.

ನಿನ್ನೆ ತಡರಾತ್ರಿಯೇ ದೇವೇಗೌಡ ಅವರಿಗೆ ಆರೋಗ್ಯ ಪರಿಸ್ಥಿತಿ ಹದಗೆಟ್ಟಿತ್ತು. ಹೀಗಾಗಿ ಮಧ್ಯರಾತ್ರಿಯೇ ಅವರನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಆ ಸಮಯದಲ್ಲಿಯೇ ಚಿಕಿತ್ಸೆ ಶುರು ಮಾಡಲಾಗಿತ್ತು. ಮಣಿಪಾಲ ಆಸ್ಪತ್ರೆ ವೈದ್ಯರು ದೊಡ್ಡಗೌಡ್ರ ಆರೋಗ್ಯದ ಮೇಲೆ ಗಮನವಿಟ್ಟಿದ್ದು, ಸರಿಯಾದ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.

 

ಸದ್ಯ ವೈದ್ಯರ ಚಿಕಿತ್ಸೆಗೆ ದೇವೇಗೌಡ ಅವರು ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂಬುದನ್ನು ವೈದ್ಯರು ತಿಳಿಸಿದ್ದಾರೆ. ದೇವೇಗೌಡರ ವಯಸ್ಸು ಕಡಿಮೆ ಏನು ಅಲ್ಲ. ಆದರೂ ಈ ಇಳಿ ವಯಸ್ಸಿನಲ್ಲೂ ರಾಜಕೀಯದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದರು. ಟ್ರಕ್ ಗಣೇಶ ಮೆರವಣಿಗೆ ಮೇಲೆ ಹರಿದು ದುರಂತ ಸಂಭವಿಸಿದ ಬಳಿಕ ಸಂತ್ರಸ್ಥರ ಕುಟುಂಬ ವರ್ಗವನ್ನು ದೇವೇಗೌಡ ಭೇಟಿಯಾಗಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...