Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿ.ಆರ್.ಗವಾಯಿ ಅವರ ಮೇಲಿನ ಶೂ ದಾಳಿ, ಮನುಕುಲಕ್ಕೆ ಅವಮಾನ : ಜೆ.ಯಾದವರೆಡ್ಡಿ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ಸುಪ್ರೀಂ ಕೋರ್ಟ್‍ನ ಮುಖ್ಯನಾಯಾಧೀಶರಾದ ಬಿ.ಆರ್.ಗವಾಯಿಯವರ ಮೇಲೆ ನಡೆದಿರುವಂತಹ ಶೂ ದಾಳಿಯು ಭಾರತದ ಸಂವಿಧಾನವನ್ನು ಅಭದ್ರಗೊಳಿಸುವ ಕುಕೃತ್ಯವಾಗಿದೆ ಎಂದು ದಲಿತ ಮುಖಂಡ ಬಾಳೆಕಾಯಿ ಶ್ರೀನಿವಾಸ್ ಆರೋಪಿಸಿದರು.

ಕಾನೂನು ವಿದ್ಯಾರ್ಥಿಗಳ ವೇದಿಕೆ ಮತ್ತು ಸಮಾನ ಮನಸ್ಕರ ವೇದಿಕೆ ಇವರ ವತಿಯಿಂದ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ, ಪ್ರತಿಭಟನಾ ರ್ಯಾಲಿಯ ಆರಂಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಹೂಮಾಲೆ ಅರ್ಪಿಸಿ ಮಾತನಾಡಿದರು. ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಅವರು ಬುದ್ಧನ ಅನುಯಾಯಿಗಳಾಗಿದ್ದು, ಹಾಗೆಯೇ ಭಾರತದ ಸಂವಿಧಾನವನ್ನು ಚಾಚು ತಪ್ಪದೇ ಪಾಲಿಸುವಂತಹ ಕಟ್ಟಾಳಾಗಿದ್ದಾರೆ. ದೇಶದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ಗವಾಯಿಯವರು ನೇಮಕವಾದಾಗಿನಿಂದ ಈ ದೇಶದ ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನು ಅಲ್ಲಾಡಿಸುವಂತಹ ಕುಕೃತ್ಯವನ್ನು ನಿರಂತವಾಗಿ ಮಾಡುತ್ತಾ ಬಂದಿದ್ದಾರೆ. ಆದರೂ ಕೂಡ ಗವಾಯಿಯವರು ಎಲ್ಲೂ ಕೂಡ ವಿಚಲಿತರಾಗದೇ ಕಾನೂನು ನ್ಯಾಯ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಗವಾಯಿಯವರ ಮೇಲೆ ನಡೆದಿರುವಂತಹ ಶೂ ಎಸೆಯುವ ಕೃತ್ಯ ಹಲ್ಲೆ ನಡೆಸುವ ಪ್ರಯತ್ನಗಳು ಮಾನಸಿಕವಾಗಿ ಕೊಳಕುತನವಾಗಿದ್ದು, ಇಂತಹವರಿಂದ ದೇಶದ ಅಭಿವೃದ್ಧಿ ಅಸಾಧ್ಯವೆಂದು ಶ್ರೀನಿವಾಸ್ ಹೇಳಿದರು.

ನಿವೃತ್ತ ಪ್ರಾಚಾರ್ಯ ಹಾಗೂ ಪ್ರಗತಿಪರ ಚಿಂತಕರಾದ ಪ್ರೊಫೇಸರ್ ಜೆ.ಯಾದವರೆಡ್ಡಿಯವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಭಾರತ ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ. ಹಾಗೆಯೇ ಇಲ್ಲಿ ಎಲ್ಲರೂ ಸಮಾನರು ಎಂಬ ಮನೋಭಾವನೆಯಿಂದ ಬದುಕು ನಡೆಸುತ್ತಿದ್ದಾರೆ. ಈ ಮಧ್ಯೆ ದೇಶದಲ್ಲಿ ಗಲಭೆ ಸೃಷ್ಟಿಸುವ ಉದ್ದೇಶದಿಂದ ಮತ್ತು ಸಂವಿಧಾನದ ಅಸ್ತಿತ್ವಕ್ಕೆ ಧಕ್ಕೆ ತರುವ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರ ಮೇಲೆ ಹಲ್ಲೆ ನಡೆಸುವಂತಹ ಪ್ರಯತ್ನ ಮಾಡಿರುವುದು ಮನುಕುಲಕ್ಕೆ ಅವಮಾನವೆಂದು ಯಾದವರೆಡ್ಡಿ ಹೇಳಿದರು.

 

ದೇಶದ ನ್ಯಾಯಾಂಗ ವ್ಯವಸ್ಥೆ ಭಾರತದ ಸಂವಿಧಾನದ ಅಡಿಪಾಯದ ಮೇಲೆ ನಿಂತಿದ್ದು, ಇದನ್ನು ಅಲುಗಾಡಿಸುವ ಪ್ರಯತ್ನಮಾಡಿದರೆ ದೇಶ ನೆಮ್ಮದಿಯಾಗಿ ಉಳಿಯಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಸಂಯಮದಿಂದ ನಡೆದುಕೊಳ್ಳಬೇಕು. ಹಾಗೆಯೇ ಶೂ ಎಸೆದಿರುವಂತಹ ಕಿಶೋರ್ ಎಂಬ ವ್ಯಕ್ತಿಯು ವಕೀಲರಾಗಿದ್ದು, ಪ್ರಜ್ಞಾಪೂರಕವಾಗಿಯೇ ತಮ್ಮ ಕುಕೃತ್ಯವನ್ನು ನಡೆಸಿದ್ದಾರೆ. ಆದ್ದರಿಂದ ಇಂತಹ ಘಟನೆಗಳು ಪುನಾರಾವರ್ತನೆಯಾಗದೇ ಸಂಘಟಿತ ಹೋರಾಟ ಮತ್ತು ಪ್ರತಿರೋಧದಿಂದ ನಿಯಂತ್ರಿಸಲು ಸಾಧ್ಯವಿದೆ ಎಂದು ಯಾದವರೆಡ್ಡಿ ಹೇಳಿದರು.

ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆಯ ಅರ್ಧಯಕ್ಷರಾದ ನರೇನಹಳ್ಳಿ ಅರುಣ್‍ಕುಮಾರ್ ಅವರು ಮಾತನಾಡಿ, ಈ ದೇಶದ ಪ್ರಧಾನಿಗಳು ಹೊರಜಗತ್ತಿಗೆ ಹೋದಾಗ ನಾನು ಬುದ್ಧನ ಭೂಮಿಯಿಂದ ಬಂದಂತವನು. ಶಾಂತಿಯೇ ನಮ್ಮ ಆದ್ಯತೆ ಎಂಬ ರೀತಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ. ಆದರೆ ದೇಶದ ಒಳಗೆ ಸಂವಿಧಾನಕ್ಕೆ ಭದ್ರತೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾದರೂ ಚಕಾರವೆತ್ತದೇ ಮೌನವಾಗಿರುವುದು ಕೇಧಕರ ಎಂದರು.

ಭಾರತ ಶಾಂತಿ ಮತ್ತು ಸೌಹಾರ್ದತೆಯ ಭೂಮಿ ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಮತ್ತು ದೌರ್ಜನ್ಯದಮತಹ ಕುಕೃತ್ಯಗಳಿಗೆ ಅವಕಾಶಗಳಿಲ್ಲ. ಈ ಭೂಮಿಯಲ್ಲಿ ಪ್ರತಿಯೊಬ್ಬರು ನೆಮ್ಮದಿ ಮತ್ತು ಸಮಾನತೆಯಿಂದ ಬದುಕಬೇಕಾದರೆ ಸೌಹಾರ್ದತೆಯನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರತಿಭಟನಾ ರ್ಯಾಲಿಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರಾದ ಅಫಾನ್ ಅಲಿ, ಸುಬಾನುಉಲ್ಲಾ, ಪೌರಕಾರ್ಮಿಕರ ಸಂಘಟನೆಯ ಕಾರ್ಯದರ್ಶಿ ಕೆ.ರಾಜಣ್ಣ, ಅಧ್ಯಕ್ಷ ಜಗದೀಶ್,ಲಂಕೇಶ್ ಮತ್ತು ಕಾನೂನು ವೇದಿಕೆಯ ಪದಾಧಿಕಾರಿಗಳು, ಕಾನೂನು ವಿದ್ಯಾರ್ಥಿ ಪರಶುರಾಮ್ ಮತ್ತು ನೂರಾರು ಜನ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now