ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 10 : ಹೆಣ್ಣು ಮಕ್ಕಳಿಗೆ ಸುಲಭವಾಗಿ ಕೈಗೆಟುಕುವ ದರದಲ್ಲಿ ಸೀರೆಗಳ ಸೇಲ್ ಈ ಬಾರಿಯ ದೀಪಾವಳಿ ವರ್ಣರಂಜಿತವಾಗಿರುತ್ತದೆ ಎಂದು ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾ ಮೆಚ್ಚುಗೆ ವ್ಯಕ್ತಪಡಿಸಿದರು.
ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಸಂಪ್ರದಾಯ ದಸರಾ ಮತ್ತು ದೀಪಾವಳಿ ಫೆಸ್ಟಿವಲ್ ಒಂದು ದಿನದ ಸೇಲ್ ಈವ್ವೆಂಟ್ ಉದ್ಗಾಟಿಸಿ ಮಾತನಾಡಿದರು.
ಮಧುಬನಿ, ಕೋಚಂಪಲ್ಲಿ, ಬನಾರಸ್, ಬಾಗಲ್ಪುರಿ, ಇಳಕಲ್ ಸೀರೆಗಳು ವರ್ಣರಂಜಿತ ಹಾಗೂ ಅತ್ಯಾಕರ್ಷಣೀಯವಾಗಿದ್ದು, ಐದು ನೂರರಿಂದ ಇಪ್ಪತ್ತು ಸಾವಿರ ರೂ.ಗಳಲ್ಲಿ ಮಾರಾಟವಾಗುತ್ತಿದೆ. ಬ್ಯಾಗ್, ಡ್ರೆಸಸ್ಸ್, ಜ್ಯೂಯಲರಿ ಸೇಲ್ ಕೂಡ ದೀಪಾವಳಿ ಹಬ್ಬದ ಸಡಗರದಲ್ಲಿರುವ ಮಹಿಳೆಯರನ್ನು ಕೈಬೀಸಿ ಕರೆಯುವಂತಿದೆ ಎಂದು ಆಯೋಜಕರ ಪರಿಶ್ರಮವನ್ನು ಶ್ಲಾಘಿಸಿದರು.
ಹೇಮಲತಾ, ಸುಮಂಗಲ, ಸೌಪರ್ಣಿಕ, ನಗರಸಭೆ ಮಾಜಿ ಸದಸ್ಯೆ ಶ್ಯಾಮಲಾ ಶಿವಪ್ರಕಾಶ್ ಇವರುಗಳು ವೇದಿಕೆಯಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















