Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸೇರಿದಂತೆ ಹಲವೆಡೆ ಅಕ್ಟೋಬರ್ 13ರ ವರೆಗೂ ಮಳೆ..!

---Advertisement---

ಬೆಂಗಳೂರು: ಮಳೆರಾಯನ ಆಗಮನ ಮತ್ತೆ ಖುಷಿ ಕೊಟ್ಟಿದೆ. ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ. ಈ ಮೂಲಕ ಬೆಳೆಗೆ ಬೇಕಾದ ಮಳೆ ಬರ್ತಾ ಇದೆ, ಭೂಮಿ ತಂಪಾಗಿದೆ ಎಂಬ ಖುಷಿಯಲ್ಲಿ ರೈತರ ಸಂತಸ ಹೆಚ್ಚಾಗಿದೆ. ಕಳೆದ ಎರಡು ದಿನದಿಂದ ಮಳೆ ಜೋರಾಗಿದೆ. ಮುಂದಿನ ಮೂರು ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ವರದಿ ನೀಡಿದೆ.

ಬೆಂಗಳೂರಿನಲ್ಲಿ ಸಿಕ್ಕಾಪಟ್ಟೆ ಮಳೆಯಾಗಿದೆ. ಕಳೆದ ರಾತ್ರಿಯಿಡಿ ಗುಡುಗು ಸಹಿತ ಜೋರು ಮಳೆಯಾಗಿದೆ. ಇದರಿಂದ ಸಾಕಷ್ಟು ಅನಾಹುತಗಳು ಸೃಷ್ಟಿಯಾಗಿವೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಸಣ್ಣಗೆ ಮಳೆ ಬಂದರು ಅದರ ಪರಿಣಾಮ ಹೆಚ್ಚಾಗಿರುತ್ತದೆ. ರಸ್ತೆಗಳಲ್ಲೆಲ್ಲಾ ನೀರು ತುಂಬಿ, ಓಡಾಟ ಕಷ್ಟವಾಗುತ್ತದೆ. ವಾಹನ ಸವಾರರಿಗೆ ಇದು ಸವಾಲಿನ ಕೆಲಸವೆ ಆಗಿರುತ್ತದೆ. ಸದ್ಯ ರಾತ್ರಿ ಇಡೀ ಸುರಿದ ಮಳೆಗೆ ಹಲವೆಡೆ ರಸ್ತೆ ತುಂಬಾ ನೀರು ತುಂಬುತ್ತು, ಮರ ಗಿಡಗಳ ಕೊಂಬೆಗಳು ಬಿದ್ದಿತ್ತು. ಈ ರೀತಿಯ ಅವಾಂತರದ ನಡುವೆ ಕೆಲಸಕ್ಕೆ ಹೋದವರು ಮಳೆಯಲ್ಲಿಯೇ ಮನೆ ಸೇರಿದ್ದರು. ಇನ್ನು ಅಕ್ಟೋಬರ್ 13 ಅಂದ್ರೆ ಎರಡು ದಿನಗಳ ಕಾಲ ಜೋರು ಮಳೆಯಾಗಲಿದೆ.

 

ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಇತರೆಡೆ ಮಳೆ ಹೆಚ್ಚಾಗಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now