ಲಸುದ್ದಿಒನ್, ಹಿರಿಯೂರು, ಅಕ್ಟೋಬರ್. 11 : ನಗರದ ಹೊರವಲಯದ ಚಳ್ಳಕೆರೆ ರಸ್ತೆಯ ಚಿನ್ನಯ್ಯನಹಟ್ಟಿ ಗೇಟ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಂಗೇನಹಳ್ಳಿ ಗ್ರಾಮದ ಭರತ್ (20) ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಗೊಂಡ ಎಂ.ಡಿ. ಕೋಟೆ ಗ್ರಾಮದ ರಾಜಪ್ಪನವರಿಗೆ ಕಾಲಿಗೆ ಮತ್ತು ಇಂದಿರಮ್ಮ ನವರಿಗೆ ಕೈಗೆ ಪೆಟ್ಟಾಗಿದ್ದು ಇಬ್ಬರಿಗೂ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



