Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುವಕರು ಧೂಮಪಾನ, ಮದ್ಯಪಾನಗಳನ್ನು ಬಿಟ್ಟು ಆರೋಗ್ಯವಂತರಾಗಿರಬೇಕು : ಸತ್ಯನಾರಾಯಣರಾವ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 12 : ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಚಳ್ಳಕೆರೆ ಡಿವೈಎಸ್ಪಿ ಸತ್ಯನಾರಾಯಣರಾವ್ ಹೇಳಿದರು.

ನಗರದ ಡಿ.ಸುಧಾಕರ್ ಕ್ರೀಡಾಂಗಣದಲ್ಲಿ ಚಳ್ಳಕೆರೆ ಪೋಲೀಸ್ ಠಾಣಾ ವತಿಯಿಂದ ಹಮ್ಮಿಕೊಂಡಿದ್ದ ನಶೆ ಮುಕ್ತ ಚಿತ್ರದುರ್ಗ ಸಧೃಡ ಚಿತ್ರದುರ್ಗ ಎನ್ನುವ ಕಾರ್ಯಕ್ರಮದ ಪ್ರಯುಕ್ತ ಯವಕ ಯವತಿಯರಿಗೆ ನಡೆದ ಕ್ರೀಡೆಗೆ ಚಾಲನೆ ನೀಡಿ ಮಾತನಾಡಿ, ಇಂದಿನ ಮಕ್ಕಳು ಚಿಕ್ಕ ವಯಸ್ಸಿನಲ್ಲೇ ದುಶ್ಚಟಗಳಿಗೆ ಒಳಪಡುತ್ತಿದ್ದಾರೆ. ಆದ್ದರಿಂದ ಇಂತಹ ದುಶ್ಚಟಗಳಿಗೆ ಬಲಿಯಾಗದಂತೆ ಅವರಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯವಾಗಿದೆ. ಯುವಕರು ಧೂಮಪಾನ, ಮದ್ಯಪಾನಗಳನ್ನು ಬಿಟ್ಟು ಆರೋಗ್ಯವಂತ ಜೀವನ ಕಟ್ಟಿಕೊಳ್ಳಬೇಕು. ಶಿಕ್ಷಣ, ಕ್ರೀಡೆ, ಯೋಗಾಸನ ಅಂತಹ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ದೇಶದ ಹಾಗೂ ಸಮಾಜದ ಒಳಿತಿಗಾಗಿ ನಮ್ಮದೆ ಆದ ಕೊಡುಗೆ ನೀಡಬೇಕು..

ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲಿ ಹಲವಾರು ಕಾಯಿಲೆಗಳು ಹುಟ್ಟಿಕೊಳ್ಳುತ್ತಿದ್ದು ಹಿಂದಿನ ತಲೆಮಾರಿನ ಮನುಷ್ಯರು 80 ವರ್ಷ ನೂರು ವರ್ಷ ಬದುಕುತ್ತಿದ್ದರು ಆದರೆ ಇಂದಿನ ದಿನಗಳ ಯುವಕರು ಹಲವಾರು ದುಶ್ಚಟಗಳಿಗೆ ಬಲಿಯಾಗಿ ಹಲವು ಕಾಯಿಲೆಗಳಿಂದ ಚಿಕ್ಕ ವಯಸ್ಸಿನಲ್ಲಿ ಮರಣ ಹೊಂದಿರುವುದು ವಿಷಾದನೀಯ ಆದ್ದರಿಂದ ಇಂದಿನ ಯುವ ಜನತೆ ದಾರಿ ತಪ್ಪದಂತೆ ಹಿರಿಯರ ಮಾರ್ಗ ಒಳ್ಳೆಯರ ಸಹವಾಸ ಬೆಳೆಸಿಕೊಳ್ಳಬೇಕು. ಉತ್ತಮವಾದ ಆರೋಗ್ಯವನ್ನು ಹೊಂದಬೇಕು. ಆರೋಗ್ಯವಂತರಾದರೆ ಸೃಧೃಡ ದೇಶ ಕಟ್ಟಲು ಸಾಧ್ಯವಾಗುತ್ತದೆ ಎಂದರು.

ಈ ಕಾರ್ಯಕ್ರಮದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಕೆ .ಕುಮಾರ್ ಕಾರ್ಯಕ್ರಮದ ಆಯೋಜನೆ ಹಾಗೂ ಕ್ರೀಡೆಯನ್ನ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಎಚ್ ಪಿಪಿಸಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ದೇವಪ್ಪ. ರಾಷ್ಟ್ರೀಯ ಸ್ವಂಸೇವದಳದ ತಿಪ್ಪೇಸ್ವಾಮಿ. ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗಳಾದ ರವಿ,ಮಂಜುನಾಥ, ಪೊಲೀಸ್ ಪೇದೆಗಳಾದ ಶಂಕ್ರಣ್ಣ. ಮಂಜುನಾಥ್ ಕೊಂಡ್ಲಹಳ್ಳಿ, ಕವಿತಾ, ಲಿಂಗರಾಜು ಹಾಗೂ ಅಶೋಕ ಸ್ಪೋರ್ಟ್ಸ್ ಕ್ಲಬ್ ನ ಮದಕರಿ ಪಾಪಣ್ಣ, ಸೇರಿದಂತೆ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳು ಯುವಕ ಯುವತಿಯರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now