Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈಗಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದೇವೇಗೌಡರಿಗೆ ಕಲ್ಯಾಣ ಕರ್ನಾಟಕದತ್ತ ಮನಸ್ಸು..!

---Advertisement---

ರಾಜಕಾರಣಿಗಳಿಗೆ ಸುಮ್ಮನೆ ಕೂರುವುದೆಂದರೆ ಕಷ್ಟ. ಸದಾ ಆಕ್ಟೀವ್ ಆಗಿನೇ ಇರುತ್ತಾರೆ. ಅದಕ್ಕೆ ಪಕ್ಕಾ ಉದಾಹರಣೆ ಎಂದರೆ ದೊಡ್ಡಗೌಡ್ರು. ಮೂತ್ರ ಸೋಂಕಿನಿಂದ ದೇವೇಗೌಡರನ್ನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಸದ್ಯ ವೈದ್ಯರ ಚಿಕಿತ್ಸೆಗೆ ಸ್ಪಂದಿಸಿದ ದೇವೇಗೌಡ ಅವರು, ಈಗ ಡಿಸ್ಚಾರ್ಜ್ ಆಗಿದ್ದಾರೆ. ಆರಾಮಾಗಿ ಮನೆಗೆ ಹೋಗಿದ್ದಾರೆ. ಆದರೆ ಈಗಲೂ ರಾಜಕೀಯದತ್ತ ಯೋಚನೆ ಮಾಡಿದ್ದಾರೆ. ಅದರಲ್ಲೂ ಕಲ್ಯಾಣ ಕರ್ನಾಟಕದತ್ತ ತಮ್ಮ ಚಿತ್ತ ನೆಟ್ಟಿದ್ದಾರೆ.

 

ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಹೆಚ್.ಡಿ. ದೇವೇಗೌಡರವರು ಗುಣಮುಖರಾಗಿ ಇಂದು ಮನೆಗೆ ಮರಳಿದ್ದಾರೆ. ವೈದ್ಯರ ಸೂಚನೆಯಂತೆ ಶ್ರೀ ದೇವೇಗೌಡರಿಗೆ ಇನ್ನೂ 15 ದಿನ ವಿಶ್ರಾಂತಿ ಅಗತ್ಯವಿದೆ. ಹೀಗಾಗಿ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಭೇಟಿ ಮಾಡಲು ಅವರ ನಿವಾಸಕ್ಕೆ ದಯವಿಟ್ಟು ತೆರಳಬೇಡಿ ಎಂದು ವಿನಂತಿ. ಪೂಜ್ಯ ದೇವೇಗೌಡರು ವಿಶ್ರಾಂತಿ ಬಳಿಕ, ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನಕ್ಕೆ ಖುದ್ದು ಆಗಮಿಸಿ ಎಲ್ಲರನ್ನೂ ಭೇಟಿಯಾಗಲಿದ್ದಾರೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಆಸ್ಪತ್ರೆಯಿಂದ ಮನೆಗೆ ತೆರಳಿದ್ದು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಯಾಕಂದ್ರೆ ಆ ಭಾಗದಲ್ಲೆಲ್ಲಾ ದೊಡ್ಡ ಮಟ್ಟಕ್ಕೆ ಪ್ರವಾಹದ ಸಮಸ್ಯೆ ಎದುರಾಗಿದೆ. ಕೇಂದ್ರ ಸರ್ಕಾರದಿಂದ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡಿಸಬೇಕೆಂದು ದೇವೇಗೌಡ ಅವರು ಯತ್ನಿಸುತ್ತಿದ್ದಾರೆ.‌ ಈ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಹ್ಲಾದ್ ಜೋಷಿ ಜೊತೆಗೆ ಮಾತುಕತೆ ನಡೆಸಿದ್ದಾರೆ. ನಾನು ಕೂಡ ಪ್ರಧಾನಿ ಮೋದಿ  ಅವರ ಜೊತೆಗೆ ಮಾತನಾಡುತ್ತೇನೆ. ನೀವು ಪ್ರಧಾನಿ ಮೋದಿ ಅವರ ಜೊತೆಗೆ ಮಾತನಾಡಿ ಎಂದು ಪ್ರಹ್ಲಾದ್ ಜೋಷಿ ಅವರು ದೇವೇಗೌಡರಿಗೆ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now