ಬೆಂಗಳೂರು: ಕೊರೊನಾ ಉಲ್ಬಣಗೊಳ್ಳುತ್ತಿದೆ. ಈ ಸಮಯದಲ್ಲಿ ಕಾಂಗ್ರೆಸ್ ನವರು ಪಾದಯಾತ್ರೆ ಮಾಡುತ್ತಿರುವುದು, ಮತ್ತಷ್ಟು ಸೋಂಕಿನ ಹೆಚ್ಚಳಕ್ಕೆ ಕಾರಣವಾಗುತ್ತೆ ಎಂಬ ಆತಂಕ ಎದುರಾಗಿದೆ. ಹೀಗಾಗಿಯೇ ಕೋರ್ಟ್ ಕೂಡ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಕೋರ್ಟ್ ವಾರ್ನಿಂಗ್ ಕೊಟ್ಟ ಬೆನ್ನಲ್ಲೇ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಕೋರ್ಟ್ ತೀರ್ಪಿನ ಆಧಾರದ ಮೇಲೆ ಮೇಕೆದಾಟು ಆಯೋಜನೆ ಮಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರವೂ ಕಾಂಗ್ರೆಸ್ ನವರಿಗೆ ಈಗಾಗಲೇ ನೋಟೀಸ್ ಜಾರಿ ಮಾಡಿದೆ ಎಂದಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಈ ಸಂಬಂಧ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಈಗಾಗಲೇ ಪಾದಯಾತ್ರೆಯಲ್ಲಿ ಭಾಗಿಯಾದವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಕೋರ್ಟ್ ಕೂಡ ಕಾಂಗ್ರೆಸ್ ನವರಿಗೆ ಪ್ರಶ್ನೆ ಮಾಡಿದೆ. ಯಾರ ಅನುಮತಿ ಪಡೆದು ಪಾದಯಾತ್ರೆ ಮಾಡಿದ್ದೀರಿ ಎಂದಿದ್ದಾರೆ.