Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ರೇಸ್ ನಿಂದ ಹಿಂದೆ ಸರಿದಿದ್ದೇನೆ : ಪ್ರಿಯಾಂಕ್ ಖರ್ಗೆ

---Advertisement---

ಮೈಸೂರು: ಸಿಎಂ ಹುದ್ದೆ ಬದಲಾವಣೆಯ ಗಾಳಿ ಬೀಸುವಾಗಲೇ ಆಕಾಂಕ್ಷಿಗಳ ಸಂಖ್ಯೆಯು ಇದ್ದೇ ಇರುತ್ತೆ. ಅದರಲ್ಲೂ ಮೊದಲ ಸ್ಥಾನದಲ್ಲಿ ಡಿಕೆ ಶಿವಕುಮಾರ್ ಅವರು ಇದ್ದಾರೆ. ಅದರಲ್ಲೂ ಈ ಅವಧಿಯಲ್ಲಿಯೇ ಸಿಎಂ ಆಸೆಯನ್ನ ಅನುಭವಿಸಿ ಬಿಡಬೇಕೆಂಬ ಕಾತುರ ಅವರಲ್ಲಿದೆ. ಇದರ ನಡುವೆ ಸತೀಶ್ ಜಾರಕಿಹೊಳಿ ಕೂಡ ಸಿಎಂ ಆಗಬೇಕು ಅಂತ ಹಲವರು ಲಾಭಿ ನಡೆಸಿದ್ದರು. ಆದ್ರೆ ಈಗ ಅವರೇ ಸಿಎಂ ಸ್ಥಾನದ ರೇಸ್ ನಿಂದ ಹಿಂದೆ ಸರಿದಿದ್ದಾರೆ.

ನಾನು ಸಿಎಂ ಸ್ಥಾನದ ರೇಸ್ ನಿಂದ ಹಿಂದೆ ಸರಿದಿದ್ದೇನೆ ಎಂದು ಮೈಸೂರಿನಲ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ನೀವೂ ರೈಟ್ ಪರ್ಸನ್ ಗೆ ಈ ಪ್ರಶ್ನೆ ಕೇಳಿ ರೈಟ್ ಉತ್ತರ ಸಿಗುತ್ತೆ. ನಾನು ಬಹಳ ಹಿಂದೆಯೇ ರೇಸ್ ನಿಂದ ಹಿಂದೆ ಸರಿದಿದ್ದೇನೆ. ಸಚಿವ ಸತೀಶ್ ಜಾರಕಿಹೊಳಿ ಈ ಹಿಂದೆ ಕೂಡ ಈ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಮುಂದಿನ ಅವಧಿಯಲ್ಲಿ ನಾನು ಕೂಡ ಸಿಎಂ ಸ್ಥಾನಕ್ಕೇರಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

 

ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ , ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಬೇಕೆಂದು ರಾಜ್ಯ ಹಾಗೂ ಹೈಕಮ್ಯಾಂಡ್ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದರು. ಸತೀಶ್ ಜಾರಕಿಹೊಳಿ ಸಿಎಂ ಆಗಲು ಮಾಜಿ ಸಚಿವ ಕೆ.ಎನ್.ರಾಜಣ್ಣ ಬೆಂಬಲಿಸುತ್ತಿದ್ದರು.
ದಲಿತ ಸಿಎಂ ಕೂಗು ಕೇಳುತ್ತೆ . ನಾವು ಡಿನ್ನರ್ ಸಭೆಯಲ್ಲಿ ಏನು ಚರ್ಚೆ ನಡೆಸಿಲ್ಲ .  ಸಿಎಂ ಡಿನ್ನರ್ ಗೆ ಕರೆದ್ರು ನಾವು ಹೋಗಿದ್ದೇವು ಅಷ್ಟೇ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದ್ದಕ್ಕಿದ್ದ ಹಾಗೇ ಸತೀಶ್ ಜಾರಕಿಹೊಳಿ ಅವರು ಸಿಎಂ ಸ್ಥಾನದಿಂದ ಹಿಂದೆ ಸರಿದದ್ದು ಆಶ್ಚರ್ಯ ಉಂಟು ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...