Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಧಾಮೂರ್ತಿ ಜಾತಿ ಸಮೀಕ್ಷೆ ಮಾಹಿತಿ ಸೋರಿಕೆ : ಆರ್.ಅಶೋಕ್ ಒತ್ತಾಯವೇನು..?

---Advertisement---

ಬೆಂಗಳೂರು: ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ತುಂಬಾನೇ ಗೌಪ್ಯವಾಗಿಡುತ್ತೇವೆ ಎಂದು ಸರ್ಕಾರ ಹೇಳಿತ್ತು. ಆದರೆ ಸುಧಾಮೂರ್ತಿ ಹಾಗೂ ನಾರಾಯಣ ದಂಪತಿ ಸಮೀಕ್ಷೆಯನ್ನು ನಿರಾಕರಣೆ ಮಾಡಿದ್ದರ ಪತ್ರ ವೈರಲ್ ಆಗಿತ್ತು. ಸುಧಾಮೂರ್ತಿ ಅವರ ನಿರಾಕರಣೆಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರು ಪ್ರತಿಕ್ರಿಯೆ ನೀಡಿದ್ದರು. ಇದೀಗ ಆರ್. ಅಶೋಕ್ ಅವರು ಈ ಸಂಬಂಧ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಸಮೀಕ್ಷೆಯಲ್ಲಿ ಸಾರ್ವಜನಿಕರು ನೀಡುವ ಮಾಹಿತಿಯ ಗೌಪ್ಯತೆಯನ್ನು ಕಾಪಾಡುತ್ತೇವೆ ಎಂದು ನಿಮ್ಮ ಸರ್ಕಾರ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದೆ. ಆ ನಿಯಮ ಪಾಲನೆ ಆಗಿಲ್ಲ. ಹೈಕೋರ್ಟ್ ಆದೇಶವಿದ್ರಯ, ಅದರಲ್ಲಿ ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ. ಜಾತಿಗಣತಿ ಸಮೀಕ್ಷೆಯಲ್ಲಿ ಸಾರ್ವಜನಿಕರು ನೀಡುವ ಮಾಹಿತಿಯನ್ನು ಕಾಪಾಡಬೇಕು. ಈ ಎರಡು ಅಂಶಗಳ ಬಗ್ಗೆ ಸ್ವತಃ ಮಾನ್ಯ ಹೈಕೋರ್ಟ್ ಸ್ಪಷ್ಟನೆ ನೀಡಿದ್ದರೂ ಸಹ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ವರ್ತಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ನಿಂದನೆ ಎಸಗುತ್ತಿದೆ ಎಂದು ಆರೋಪಿಸಿದರು.

ಬೆಂಗಳೂರಿನ್ಳಿ ಹದಗೆಟ್ಟಿರುವ ರಸ್ತೆಗಳ ಬಗ್ಗೆ ಖ್ಯಾತ ಉದ್ಯಮಿಗಳು ದನಿ ಎತ್ತಿದಾಗ ನಿಮ್ಮ ಸಿಎಸ್ಆರ್ ನಿಧಿಯಲ್ಲಿ ನೀವೇ ರಸ್ತಡಗುಂಡಿ ಮುಚ್ಚಿ, ನಿಮ್ಮ ಸಿಎಸ್ಆರ್ ನಿಧಿಯ ಲೆಕ್ಕ ಕೊಡಿ ಎಂದು ಬೆದರಿಸಿ ಅವಮಾನ ಮಾಡಿದಗದ ಕಾಂಗ್ರೆಸ್ ನಾಯಕರು ಈಗ ಒಂದು ಹೆಜ್ಜೆ ಮುಂದೆ ಹೋಗಿ ಇನ್ಫೋಸಿಸ್ ನವರು ಬೃಹಸ್ಪತಿಗಳಾ..? ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸದವರು ದೇಶದ್ರೋಹಿಗಳು” ಎಂದು ನಿಂದಿಸುವ ಮೂಲಕ ಮತ್ತೊಮ್ಮೆ ದರ್ಪ, ದುರಹಂಕಾರ ಮೆರೆದಿದ್ದಾರೆ ಎಂದು ಸಿಎಂ ಹಾಗೂ ಕಾಂಗ್ರೆಸ್ ನಾಯಕರ ನಡೆ, ಆಡಳಿತವನ್ನು ಕಟುವಾಗಿ ಟೀಕಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...