Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ರಸ್ತೆ ಗುಂಡಿ ಮುಚ್ಚಿದ ಆರ್ಯ ವೈಶ್ಯ ಸಂಘ : ಜನರ ಮೆಚ್ಚುಗೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ನಗರದ ವಾಸವಿ ಮಹಲ್ ರಸ್ತೆಯಲ್ಲಿದ್ದ ದೊಡ್ಡ ಗುಂಡಿಯನ್ನು ಮುಚ್ಚುವ ಕೆಲಸವನ್ನು ಆರ್ಯವೈಶ್ಯ ಸಂಘವು ಮಾಡಿದೆ.

ನಗರದ ವಾಸವಿ ಮಹಲ್ ಮುಂಭಾಗದಲ್ಲಿ ಪ್ರತಿನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ಮತ್ತು ಈ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತದೆ. ಇದೊಂದು ಪ್ರಧಾನ ರಸ್ತೆಯಾಗಿದ್ದು, ರಸ್ತೆಯ ತಿರುವಿನಲ್ಲಿ ದೊಡ್ಡ ಗಾತ್ರದ ಗುಂಡಿ ಬಿದ್ದು ಹಾಳಾಗಿತ್ತು. ವಾಹನ ಚಾಲಕರು ಮತ್ತು ಜನರು ಅನೇಕ ಸಂದರ್ಭಗಳಲ್ಲಿ ಬಿದ್ದು, ಗಾಯಗೊಂಡಿರುವುರಸ್ತೆಯ ರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಫಲ ಕಾಣಲಿಲ್ಲ.

ಮಳೆ ಸುರಿದಾಗ ಈ ಗುಂಡಿಯಲ್ಲಿ ನೀರು ಸಂಗ್ರಹವಾಗಿ ವಾಹನ ಸವಾರರು ಜೀವಭಯದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಉಂಟಾಗಿತ್ತು. ಆದ್ದರಿಂದ ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಬಾರದು ಎಂಬ ಸಾಮಾಜಿಕ ಕಳಕಳಿಯಿಂದ ಇಂದು ಆರ್ಯವೈಶ್ಯ ಸಂಘವು ಸುಮಾರು 18,000 ವೆಚ್ಚ ಮಾಡಿ ದೊಡ್ಡ ಗುಂಡಿಯನ್ನು ಮುಚ್ಚಿ ದುರಸ್ತಿ ಕಾರ್ಯ ನಿರ್ವಹಿಸಿದೆ.

ಸಮಾಜ ಉಪಯೋಗಿ ಕಾರ್ಯಕ್ರಮಗಳಿಗೆ ಆರ್ಯವೈಶ್ಯ ಸಂಘ ಸದಾ ಮುಂದು ಎಂಬುದನ್ನು ಈ ಮೂಲಕ ಸಾಬೀತು ಪಡಿಸಿದೆ. ಆರ್ಯವೈಶ್ಯ ಸಂಘದ ನಿರ್ದೇಶಕ ಮಂಡಳಿಯ ನೇತೃತ್ವದಲ್ಲಿ ಈ ದುರಸ್ತಿ ಕಾರ್ಯ ನಡೆದಿರುವುದನ್ನು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...