ತುಮಕೂರು: ಆರ್ ಎಸ್ ಎಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಮೇಲೆ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆದು, ಆರ್ ಎಸ್ ಎಸ್ ಕಾರ್ಯಕ್ರಮಗಳು ಸರ್ಕಾರಿ ಜಾಗದಲ್ಲಿ ನಡೆಯಬೇಕು ಅಂದ್ರೆ ಅನುಮತಿ ಪಡೆಯಬೇಕು ಎಂದು ಆದೇಶ ಹೊರಡಿಸಿತ್ತು. ಈ ಸಂಬಂಧ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಆರ್ ಎಸ್ವೆಸ್ ಪರವಾಗಿಯೇ ಮಾತನಾಡಿದ್ದಾರೆ.
ಪ್ರಿಯಾಂಕ್ ಖರ್ಗೆ ಬರೆದ ಪತ್ರದ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, ಪರ್ಮಿಷನ್ ತಗೊಂಡು ಮಾಡಿ ಅಂತ ಹೇಳಿದ್ದಾರೆಯೇ ವಿನಃ ಆರ್ ಎಸ್ ಎಸ್ ಬ್ಯಾನ್ ಮಾಡಿ ಎಂದು ಪ್ರಿಯಾಂಕ್ ಖರ್ಗೆ ಹೇಳಿಲ್ಲ. ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್ ಆಗಲಿ, ಬೇರೆ ಯಾವುದೇ ಸಂಘಟನೆ ಆಗಲಿ ಅನುಮತಿ ಪಡೆದು ಕಾರ್ಯಕ್ರಮ ಮಾಡಿ ಎಂದು ಹೇಳಿದ್ದಾರೆ. ಅದು ಎಷ್ಟರ ಮಟ್ಟಿಗೆ ಜಾರಿ ಆಗುತ್ತೆ ಎನ್ನುವುದನ್ನು ನೋಡೋಣಾ. ಈದ್ಗಾ ಮೈದಾನದಲ್ಲಿ ರಸ್ತೆಯಲ್ಲಿಯೇ ನಮಾಜ್ ಮಾಡುತ್ತಾರೆ. ಅವರು (ಮುಸ್ಲಿಮರು) ಪರ್ಮಿಷನ್ ತೆಗೆದುಕೊಳ್ಳುತ್ತಾರಾ..? ರಸ್ತೆಯಲ್ಲಿ ನಮಾಜ್ ಮಾಡಲು ಪರ್ಮಿಷನ್ ಕೊಡಿ ಎಂದು ಅವರು ಬರ್ತಾರಾ..? ಅಥವಾ ಪರ್ಮಿಷನ್ ತೆಗೆದುಕೊಳ್ಳಿ ಎಂದು ಹೇಳುತ್ತೀವಾ..?
ಜಾರಿ ಮಾಡಲಾಗದ ಕಾನೂನು ತಂದ್ರೆ ಪುಸ್ತಕದಲ್ಲಿ ಇರಬೇಕು ಅಷ್ಟೇ ಎಂದು ಆರ್ ಎಸ್ ಎಸ್ ನಿರ್ಬಂಧ ಹಾಕುವ ಸರ್ಕಾರದ ಧೋರಣೆಗೆ ತಿರುಗೇಟು ನೀಡಿದ್ದಾರೆ. ಈ ಮೂಲಕ ತಮ್ಮದೇ ಸರ್ಕಾರ ತಂದ ಆದೇಶಕ್ಕೆ ಬೇಸರ ವ್ಯಕ್ತಪಡಿಸಿ, ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮತಗಳ್ಳತನದಲ್ಲಿ ತಮ್ಮದು ತಪ್ಪಿದೆ ಅಂತ ಹೇಳಿ ಸಚಿವ ಸ್ಥಾನ ಕಳೆದುಕೊಂಡಿದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






