ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಿಂದ ಅಂದ್ರೆ ಭಾನುವಾರದಿಂದ ಜೋರು ಮಳೆಯಾಗುತ್ತಿದೆ. ಹವಮಾನ ಇಲಾಖೆಯ ವರದಿ ಪ್ರಕಾರ ಮುಂದಿನ 7 ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ವರದಿ ನೀಡಿದೆ. ಅದರಲ್ಲೂ ನಿನ್ನೆ ಚಿತ್ರದುರ್ಗ ಜಿಲ್ಲೆಯಾದ್ಯಂತ ವರುಣನ ಅಬ್ಬರ ಜೋರಾಗಿದೆ.
ಹಿರಿಯೂರು ತಾಲ್ಲೂಕಿನ ಧರ್ಮಪುರ ಸುತ್ತಮುತ್ತ ಭರ್ಜರಿ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಅರಳೀಕೆರೆ ಸಮೀಪ ಹಳ್ಳತುಂಬಿ ಹರಿಯುತ್ತಿದೆ. ಹಳ್ಳತುಂಬಿ ಹರಿಯುತ್ತಿದೆ. ಹಳ್ಳದ ನೀರು ಹರಿದು ಟೊಮ್ಯಾಟೊ, ಈರುಳ್ಳಿ ಬೆಳೆ ಜಲಾವೃತವಾಗಿದೆ. ಹಿರಿಯೂರು ತಾಲೂಕಿನಲ್ಲಿ ಅರಳೀಕೆರೆ ಗೊಲ್ಲರಹಟ್ಟಿಯ ಮುದ್ದಣ್ಣಗೆ ಸೇರಿದ ಎರಡು ಎಕರೆಯಲ್ಲಿ ಬೆಳೆದ ಟೊಮ್ಯಾಟೊ ಜಲಾವೃತದಿಂದ ಹಾಳಾಗಿದೆ. ಇದರಿಂದ ರೈತರು ಕಂಗಲಾಗಿದ್ದಾರೆ. ಈರುಳ್ಳಿ ಮತ್ತು ದಾಳಿಂಬೆ ಬೆಳೆಗಾರರಿಗೂ ಸಂಕಷ್ಟಪ ಎದುರಾಗಿದೆ.
ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾಎ, ಮಂಡ್ಯ, ಮೈಸೂರು, ಬೆಂಗಳೂರು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಭಾಗದಲ್ಲಿ ಮುಂದಿನ ಏಳು ದಿನವೂ ಸಾಧಾರಣ ಮಳೆಯಾಗಲಿದೆ. ಹಾಗೇ ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಮುಂದಿನ 7 ದಿನಗಳ ಮಳೆ ಮುನ್ಸೂಚನೆ ಮತ್ತು ಎಚ್ಚರಿಕೆಗಳನ್ನು (ಮೂಲ: IMD) ರಾಜ್ಯದಾದ್ಯಂತ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಪಾಧ್ಯತೆ ಇದೆ ದಂದು ಐಎಂಡಿ ಟ್ವೀಟ್ ಮಾಡಿದೆ.


