Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ : ಶಾಲೆಗಳ ಬಗ್ಗೆ ಸಚಿವ ನಾಗೇಶ್ ಹೇಳಿದ್ದು ಹೀಗೆ..!

Facebook
Twitter
Telegram
WhatsApp

ಬೆಂಗಳೂರು: ಈಗಾಗಲೇ ಕಳೆದ ಎರಡು ವರ್ಷದಿಂದ ಮಕ್ಕಳಿಗೆ ಸರಿಯಾದ ಭೌತಿಕ ಶಿಕ್ಷಣ ದೊರಕದೆ ಸಾಕಷ್ಟು ಹಿಂದುಳಿದಿದ್ದಾರೆ. ಇತ್ತೀಚೆಗಷ್ಟೇ ಎಲ್ಲಾ ರೀತಿಯಲ್ಲೂ ಮಕ್ಕಳು ಆ್ಯಕ್ಟೀವ್ ಆಗಿದ್ದಾರೆ. ಆದ್ರೆ ಈ ಮಧ್ಯೆ ಕೊರೊನಾ ಮತ್ತೆ ಹೆಚ್ಚಾಗುತ್ತಿದ್ದು, ಆತಂಕ ಸೃಷ್ಟಿ ಮಾಡಿದೆ. ಮತ್ತೆ ಶಾಲಾ ಕಾಲೇಜುಗಳು ಬಂದ್ ಆಗಿ, ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಕುತ್ತು ಬೀಳುತ್ತಾ ಎಂದು ಯೋಚಿಸುತ್ತಿರುವಾಗ್ಲೇ, ಸಚಿವ ನಾಗೇಶ್ ಇಜ ಬಗ್ಗೆ ಮಾಹಿತಿ ನೀಡಿದ್ದಾರೆ.

ಇಂದು ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆಮ್ಸ್ ಮೂಲಕ ಸಭೆ ನಡೆಸಿದ ಸಚಿವ ನಾಗೇಶ್, ರಾಜ್ಯದಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದರು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಮೊದಲು ಮತ್ತು ಎರಡನೇ ಅಲೆಯ ತೀವ್ರತೆ ಕಂಡು ಬರುತ್ತಿಲ್ಲ. ಮಕ್ಕಳಿಗೆ ಡೇಂಜರ್ ಎಂದೇ ಹೇಳಲಾಗುತ್ತದೆ. ಆದ್ರೆ ಆ ಪ್ರಮಾಣದಲ್ಲೇನು ಪತ್ತೆಯಾಗಿಲ್ಲ. ಹೀಗಾಗಿ ಭೌತಿಕ ತರಗತಿಗಳನ್ನು ನಿಲ್ಲಿಸುವ ಅಗತ್ಯತೆ ಇಲ್ಲ ಎನ್ನಿಸುತ್ತಿದೆ.

ತಾಲೂಕು, ಸ್ಥಳೀಯ ಮಟ್ಟದಲ್ಲಿ ಕೋವಿಡ್ ಪಾಸಿಟಿವಿಟಿ ದರ ಆಧರಿಸಿ, ಶಾಲೆ, ಪಿಯು ತರಗತಿಗಳ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಆನ್‍ಲೈನ್ ಕ್ಲಾಸ್/ಪರ್ಯಾಯ ಬೋಧನಾ ವಿಧಾನದ ತರಗತಿ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ, ತಹಶೀಲ್ದಾರ್‍ಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

error: Content is protected !!