Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಸರ್ಕಾರದಲ್ಲಿ ಉತ್ತರಾಧಿಕಾರಿ ಕಿಚ್ಚು : ಯತೀಂದ್ರ ಮಾತಿಗೆ ಡಿಕೆಶಿ ಏನಂದ್ರು..?

---Advertisement---

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಈಗಷ್ಟೇ ರಾಯರ ದರ್ಶನ ಮುಗಿಸಿಕೊಂಡು, ಸಂಕಲ್ಪ ಮಾಡಿಕೊಂಡು ಬರುತ್ತಿದ್ದಾರೆ. ಸಿಎಂ ಆಗುವ ದೊಡ್ಡ ಆಸೆಯಲ್ಲಿರುವಾಗ, ಯತೀಂದ್ರ ಸಿದ್ದರಾಮಯ್ಯ ಅವರು ಉತ್ತರಾಧಿಕಾರದ ಕಿಡಿ ಹಚ್ಚಿದ್ದಾರೆ. ಸಿಎಂ ಸಿದ್ದರಾಮಯ್ಯ ನಂತರ ಯಾರು ಸಿಎಂ ಆಗಬಹುದು ಎಂಬ ಚರ್ಚೆಯನ್ನ ಹುಟ್ಟು ಹಾಕಿದ್ದಾರೆ.

ನಮ್ಮ ತಂದೆಯವರು ರಾಜಕೀಯ ಕೊನೆಗಾಲದಲ್ಲಿದ್ದಾರೆ. ವೈಚಾರಿಕವಾಗಿ ಪ್ರಗತಿಪರ ತತ್ವ, ಸಿದ್ಧಾಂತ ಇರುವ ನಾಯಕ ಬೇಕು. ಮಾರ್ಗದರ್ಶನ ಮಾಡಿ ನೇತೃತ್ವ ವಹಿಸಿಕೊಳ್ಳುವ ನಾಯಕ ಬೇಕು. ಸತೀಶ್ ಜಾರಕಿಹೊಳಿ ಅಂತಹ ಜವಾಬ್ದಾರಿ ನಿಭಾಯಿಸುತ್ತಾರೆ ಎಂಬ ಮಾತನ್ನ ಹೇಳಿದ್ದರು.

ಯಾವಾಗ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಯ್ತೋ ಅದಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೂಡ ನೀಡಿದ್ದಾರೆ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡು ಇರುವವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕೂಡ ನಂಬಿಕೆಯನ್ನು ಹೊಂದಿದ್ದಾರೆ. ಅದೇ ಸಿದ್ಧಾಂತದಲ್ಲಿ ಹೋಗುತ್ತಿದ್ದಾರೆ. ಆ ರೀತಿ ಸೈದ್ಧಾಂತಿಕವಾಗಿ ರಾಜಕಾರಣ ಮಾಡುವವರನ್ನು ಲೀಡ್ ಮಾಡಲಿ ಎಂಬ ಉದ್ದೇಶದಿಂದ ನಾನು ಆ ಮಾತನ್ನ ಹೇಳಿದ್ದೇನೆ. ರಾಜಕೀಯದ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಏನು ಹೇಳಿದ್ದಾರೋ ಅವರನ್ನೇ ಕೇಳಬೇಕು, ಅವರ ಬಳಿಯೇ ಹೋಗಿ ಕೇಳಿ. ನನ್ನ ಬಳಿ ಕೇಳಿದರೆ ಏನಾಗಬೇಕು. ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ. ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಹೇಳಿದ್ದೀವಿ, ಪಕ್ಷ ಏನು ಹೇಳುತ್ತೋ ಅದನ್ನು ಒಟ್ಟಿಗೆ ಮಾಡಿಕೊಂಡು ಹೋಗ್ತೀವೆಂದು ಹೇಳಿದ್ದೇವೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now