ಬೆಂಗಳೂರು: ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪಾದಯಾತ್ರೆ ನಿಲ್ಲಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇದೀಗ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಪಾದಯಾತ್ರೆ ನಿಲ್ಲಿಸಲು ತಿಳಿಸಿದ್ದಾರೆ.
ಕೊರೊನಾ ಕಾಲದಲ್ಲಿ ಪಾದಯಾತ್ರೆ ಒಳ್ಳೆಯದಲ್ಲ. ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಸರಿಯಲ್ಲ. ಮೇಕೆದಾಟು ಯೋಜನೆಗೆ ಕ್ರಮ ಕೈಗೊಳ್ಳುತ್ತೇವೆ. ಕೊರೊನಾ ಮುಗಿದ ಬಳಿಕ ಎಲ್ಲರೂ ಒಟ್ಟಾಗಿ ಮುಂದಿನ ದಿನಗಳಲ್ಲಿ ಮೇಕೆದಾಟಿಗಾಗಿ ಹೋರಾಟ ಮಾಡೋಣ. ಸದ್ಯಕ್ಕೆ ಪಾದಯಾತ್ರೆ ಕೈಬಿಡಿ ಎಂದು ಸಿಎಂ ಬೊಮ್ಮಾಯಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಮೇಕೆದಾಟು ಯೋಜನೆಗೆ ಬೇಕಾದ ಎಲ್ಲಾ ತೀರ್ಮಾನ ತೆಗೆದುಕೊಳ್ಳಲು ಸಿದ್ದನಿದ್ದೇನೆ. ಹೈಕೋರ್ಟ್ ಕೂಡ ಇದೇ ವಿಚಾರಕ್ಕೆ ತರಾಟೆಗೆ ತೆಗೆದುಕೊಂಡಿದೆ. ಸಾರ್ವಜನಿಕರ ಆಕ್ರೋಶ ಕೂಡ ವ್ಯಕ್ತಪಡಿಸುತ್ತಿದ್ದಾರೆ. ಈ ಕೂಡಲೇ ಪಾದಯಾತ್ರೆಯನ್ನ ಕೈಬಿಡಿ ಎಂದು ಮನವಿ ಮಾಡಿದ್ದಾರೆ.