Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸತೀಶ್ ಗೌಡಗೂ, ಜೆಡಿಎಸ್ ಗೂ ಸಂಬಂಧವಿಲ್ಲ : ಹನುಮಂತರಾಯಪ್ಪ

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 23 : ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಓಡಾಟ ಮಾಡುತ್ತಿರುವ ಸತೀಶ್ ಗೌಡ ಎಂಬ ಅನಾಮಧೇಯ ವ್ಯಕ್ತಿಗೂ ಹಾಗೂ ಜೆಡಿಎಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆಂದು ತಾಲೂಕು ಜೆಡಿಎಸ್ ಅಧ್ಯಕ್ಷ ಹನುಮಂತರಾಯಪ್ಪ ಹೇಳಿದರು.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಗುರುವಾರ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿ ಅವರು ಕ್ಷೇತ್ರದಲ್ಲಿನ ಅಭಿವೃದ್ಧಿ, ರೈತರ ಸಮಸ್ಯೆಗಳು ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದುಕೊಂಡರು ಎಂದರು.

ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ 2028ರ ವಿಧಾನಸಭಾ ಚುನಾವಣೆಯ ನಾನೇ ಜೆಡಿಎಸ್ ಅಭ್ಯರ್ಥಿ ಎಂದು ವ್ಯಕ್ತಿ ಸುಳ್ಳು ಹೇಳಿಕೊಂಡು ಪಕ್ಷದ ಸಂಘಟನೆಯಲ್ಲಿ ಸತೀಶ್ ಗೌಡ ಗೊಂದಲ ಸೃಷ್ಟಿಸಿರುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಸುಖ ಸುಮ್ಮನೆ ಮುಂದೇನಾದರೂ ಪಕ್ಷದ ವರಿಷ್ಠರ ಭಾವಚಿತ್ರಗಳು, ಪಕ್ಷದ ಚಿಹ್ನೆ, ಶಾಲು ಬಳಕೆ ಮಾಡಿಕೊಂಡು ಸಂಘಟನೆಯಲ್ಲಿ ಗೊಂದಲ ಮೂಡಿಸಿದರೆ ನಿರ್ದಾಕ್ಷಣವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಪಕ್ಷದ ಮುಖಂಡರು ಪರೋಕ್ಷವಾಗಿ ಸತೀಶ್ ಗೌಡಗೆ ಬೆಂಬಲ ಸೂಚಿಸಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಹಿರಿಯೂರು ಕ್ಷೇತ್ರಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ. ಶೀಘ್ರದಲ್ಲೇ ಕೇಂದ್ರ ಸಚಿವರು ಬರಲಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now