ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 23 : ತಾಲ್ಲೂಕಿನ ಮಿರಾಸಾಬಿಹಳ್ಳಿ ಗ್ರಾಮದ ಸಮೀಪ ರಾಣಿಕೆರೆ ಚಾನಲ್ ಪಕ್ಕದ ರಸ್ತೆಯಲ್ಲಿ ಹಣವನ್ನ ಪಣಕ್ಕಿಟ್ಟು ಕೋಳಿ ಅಂಕ ಪಂದ್ಯ ಜೂಜಾಟದಲ್ಲಿ ತೊಡಗಿದ್ದ 15 ಮಂದಿಯನ್ನು ಚಳ್ಳಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಳ್ಳಕೆರೆ ಡಿವೈಎಸ್ಪಿ ಎಂ.ಜೆ ಸತ್ಯನಾರಾಯಣ ರಾವ್ ಇವರ ಸೂಚನೆ ಮೇರೆಗೆ ಚಳ್ಳಕೆರೆ ಪೊಲೀಸ್ ಇನ್ಸ್‌ಪೆಕರ್ ಕೆ.ಕುಮಾರ್ ಇವರ ನೇತೃತ್ವದಲ್ಲಿ ಕೋಳಿ ಪಂದ್ಯ ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸಿ ಕೋಳಿ ಜೂಜಾಟಕ್ಕೆ ಬಳಸಿಕೊಂಡಿದ್ದ 11,710 ರೂಪಾಯಿ ಹಣವನ್ನು ವಶಕ್ಕೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











