ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಕರ್ನಾಟಕ ಆರ್ಯವೈಶ್ಯ ಮಹಾಸಭೆ ಬೆಂಗಳೂರು, ಜಿಲ್ಲಾ ಸಮಿತಿ ಆರ್ಯವೈಶ್ಯ ಸಂಘದ ಸಂಯುಕ್ತಾಶ್ರಯದಲ್ಲಿ ಅ.26 ರ ಇಂದು ಬೆಳಿಗ್ಗೆ 10-30 ಕ್ಕೆ ಜಿಲ್ಲಾ ಸಮಾವೇಶ ಹಾಗೂ ಜಿಲ್ಲೆಯ ಸಾಧಕರಿಗೆ ಸನ್ಮಾನ ಸಮಾರಂಭವನ್ನು ವಾಸವಿ ಮಹಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಆರ್ಯವೈಶ್ಯ ಮಹಾಸಭಾ ರಾಜ್ಯಾಧ್ಯಕ್ಷ ಆರ್.ಪಿ.ರವಿಶಂಕರ್ ಕಾರ್ಯಕ್ರಮ ಉದ್ಗಾಟಿಸುವರು.
ಜಿಲ್ಲಾ ಸಮಿತಿ ಅಧ್ಯಕ್ಷ ಎನ್.ಶಶಿಧರಗುಪ್ತ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಆರ್ಯವೈಶ್ಯ ಸಂಘದ ಅಧ್ಯಕ್ಷ ಎಲ್.ಇ.ಶ್ರೀನಿವಾಸಬಾಬು, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದ್ರಿನಾಥ್, ಕೆ.ಆರ್.ಕೃಷ್ಣ
ಎ.ಆರ್.ರವಿಕುಮಾರ್, ಬಿ.ಎನ್.ನಟರಾಜ್, ಕೆ.ವಿ.ಪ್ರಸನ್ನಕುಮಾರ್, ಎಸ್.ನಾಗರಾಜ್ ಇವರುಗಳು ಪಾಲ್ಗೊಳ್ಳಲಿದ್ದಾರೆಂದು ಆರ್ಯವೈಶ್ಯ ಸಂಘದ ಕಾರ್ಯದರ್ಶಿ
ಡಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.






