Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೈಕಮಾಂಡ್ ನಾಯಕರನ್ನು ಭೇಟಿಯಾಗದೆ ಬಂದ ಡಿಕೆ ಶಿವಕುಮಾರ್..!

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಭೇಟಿಗೆಂದು ದೆಹಲಿಗೆ ತೆರಳಿದ್ದರು‌. ಆದರೆ ನಿರಾಸೆಯಿಂದ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಅಂದ್ರೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡದೆ ದೆಹಲಿಯಿಂದ ವಾಪಾಸ್ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಹೋಗ್ತೇನೆ ಎಂಬ ಮಾತನ್ನ ಹೇಳಿದ್ದಾರೆ. ಆದರೆ ಅದಕ್ಕೂ ಮುನ್ನವೇ ಡಿಕೆ ಶಿವಕುಮಾರ್ ಅವರು ದೆಹಲಿಗೆ ಹೋಗಿದ್ದರು.

ಡಿಸಿಎಂ ಡಿಕೆ ಶಿವಕುಮಾರ್ ಅವರು, ಹೈಕಮಾಂಡ್ ನಾಯಕರ ಭೇಟಿಗೆ ಸಮಯ ಕೇಳಿದ್ದರು. ಈ ಹಿನ್ನೆಲೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇಂದು ಭೇಟಿಗೆ ಅವಕಾಶ ನೀಡಿದ್ದರಂತೆ. ಅಂದ್ರೆ ಬೆಳಗ್ಗೆ 10 ಯಿಂದ 11 ಗಂಟೆಯ ಒಳಗೆ ಭೇಟಿಯಾಗುತ್ತಾರೆ ಎಂಬ ಮಾತನ್ನ ಹೇಳಿದ್ದರಂತೆ. ಹೀಗಾಗಿಯೇ ಡಿಕೆ ಶಿವಕುಮಾರ್ ಅವರು ಭಾನುವಾರ ಸಂಜೆಯೇ ದೆಹಲಿಗೆ ಹೋಗಿದ್ದರು. ಆದರೆ ಇಂದು ಬೆಳಗ್ಗೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಗಲಿಲ್ಲ. ಹೀಗಾಗಿಯೇ ಡಿಸಿಎಂ ಡಿಕೆ ಶಿವಕುಮಾರ್ ಅವರು ನಿರಾಸೆಯಿಂದ ವಾಪಾಸ್ ಬಂದಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ವಿಮಾನ ಹತ್ತಿ ವಾಪಾಸ್ ಬೆಂಗಳೂರಿಗೆ ಬಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರು, ದೆಹಲಿಗೆ ತೆರಳುವುದಕ್ಕೆ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ್ದರು. ಈ ವೇಳೆ ನಾನು ನಿಯಮಿತವಾಗಿ ದೆಹಲಿಗೆ ಕೆಲಸ ಇದ್ದಾಗ ಹೋಗುತ್ತಿರುತ್ತೇನೆ. ಹೈಕಮಾಂಡ್ ‌ನಾಯಕರನ್ನು ಭೇಟಿ ಮಾಡುವುದಕ್ಕೆ ಹೋಗುತ್ತಿರುತ್ತೇನೆ. ಹಾಗೇ ವಿಶ್ರಾಂತಿ ಪಡೆಯಲು, ಶಾಪಿಂಗ್ ಮಾಡುವುದಕ್ಕೆ ಜೊತೆಗೆ ನ್ಯಾಯಾಲಯದ ಪ್ರಕರಣಗಳಿಗೂ ಹೋಗುತ್ತೇನೆ ಎಂದು ಕ್ಲಾರಿಟಿ ಕೊಟ್ಟಿದ್ದರು. ಆದರೆ ಈ ಬಾರಿ ಹೈಕಮಾಂಡ್ ನಾಯಕರ ಭೇಟಿಗೆ ಯಾಕೆ ಹೋಗ್ತಾ ಇದ್ದೇನೆ ಎಂದು ಹೇಳಿರಲಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now