Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಂಥಾ ಚಂಡಮಾರುತ : ಕರ್ನಾಟಕದ ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..?

---Advertisement---

ಬೆಂಗಳೂರು: ಮೊಂಥಾ ಎಂಬ ಹೆಸರಿನಲ್ಲಿ ಚಂಡಮಾರುತವೊಂದು ಲಗ್ಗೆ ಇಟ್ಟಿದೆ. ಆಂಧ್ರಪ್ರದೇಶದಲ್ಲಿ ಹಲ್ ಚಲ್ ಸೃಷ್ಟಿ ಮಾಡಿರುವ ಚಂಡ ಮಾರುತ ಕರ್ನಾಟಕಕ್ಕೂ ಎಫೆಕ್ಟ್ ಕೊಟ್ಟಿದೆ. ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲಗಲೂ ಮಳೆಯಾಗುತ್ತಿದ್ದು, ಐಎಂಡಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಗಂಟೆಗೆ 40 ಕಿಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಇನ್ನು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಚಂಡ ಮಾರುತದ ಅಬ್ಬರದಿಂದ ಮಂಗಳೂರಿನ ತಣ್ಣೀರು ಬಾವಿ ಸಮುದ್ರ ತೀರದಲ್ಲಿ ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆ ಇಲಾಖೆಯು ಮೀನುಗಾರರಿಗೆ ಆಳಸಮುದ್ರ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದೆ. ಕಳೆದ ಮೂರು ದಿನಗಳ ಹಿಂದೆಯೇ ಸೂಚನೆ ನೀಡಿಲಾಗಿದ್ದು, ತೆರಳಿದ್ದ ಮೀನುಗಾರರು ವಾಪಾಸ್ ಬರುವಂತೆ ಸೂಚನೆ ನೀಡಲಾಗಿದೆ. ಬಹುತೇಕ ದೋಣಿಗಳು ಬಂದರಿನಲ್ಲಿ ಲಂಗರು ಹಾಕಿವೆ. ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ.

ಇನ್ನು ಆಂಧ್ರದಲ್ಲಿ ಮೋಂಥಾ ಚಂಡಮಾರುತವನ್ನು ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೀನುಗಾರರು ಹಾಗೂ ಕರಾವಳಿ ತೀರದ ನಿವಾಸಿಗಳಿಗೆ ಎಚ್ಚರಿಕೆಯನ್ನು ಕೊಡಲಾಗಿದೆ. ಅಲ್ಲಿನ ಜಿಲ್ಲಾಡಳಿತ ಶಾಲಾ – ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. 24 ಗಂಟೆಗಳಲ್ಲಿ ಜೋರು ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದ್ದು, ಡಿಸಿಎಂ ಪವನ್ ಕಲ್ಯಾಣ್ ಸಹ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮುಂಜಾಗ್ರತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ‌ ನೀಡಿದ್ದಾರೆ. ಚಂಡಮಾರುತದ ಎಫೆಕ್ಟ್ ನಿಂದಾಗಿ ಬೆಳಗ್ಗೆಯಿಂದಾನೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now