RSS ಬಗ್ಗೆ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆ : ಕೋರ್ಟ್ ಹೇಳಿದ್ದೇನು..?

1 Min Read

ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಆರ್ ಎಸ್ ಎಸ್ ವಿಚಾರಕ್ಕೆ ತೆಗೆದುಕೊಂಡ ನಿರ್ಧಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆರ್ ಎಸ್ ಎಸ್ ಪಥ ಸಂಚಲನಕ್ಕೆ ಸರ್ಕಾರಿ ಜಾಗ ಬಳಸಬೇಕೆಂದರೆ ಅನುಮತಿ ಪಡೆಯಲೇಬೇಕೆಂದು ಆದೇಶ ಹೊರಡಿಸಲಾಗಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜಸ್ಟೀಸ್ ನಾಗಪ್ರಸನ್ನ ಅವರಿದ್ದ ಪೀಠವು ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಗೆ ನೋಟೀಸ್ ಅನ್ನು ನೀಡಿದೆ‌.

ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಅನುಮತಿಯಿಲ್ಲದೆ 10 ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19(1) A,B ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಈ ಅಧಿಕಾರವನ್ನು ಕಿತ್ತುಕೊಳ್ಳಲು ಆಗದು ಎಂದು ಹೈಕೋರ್ಟ್ ಹೇಳಿದೆ.

ಸದ್ಯಕ್ಕೆ ಸರ್ಕಾರದ ಈ ನಿರ್ಧಾರಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ನಾಯಕರಿಂದ ಬಾರೀ ವಿರೋಧವೂ ವ್ಯಕ್ತವಾಗಿತ್ತು. ಅದರಲ್ಲೂ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನವನ್ನು ತಡೆದ ಕಾರಣ, ನವೆಂಬರ್ 2ರಂದು ಅಲ್ಲಿಯೇ ಪಥ ಸಂಚಲನ ಮಾಡ್ತೇವೆ ಎಂಬ ಹಠ ತೊಟ್ಟಿದ್ದಾರೆ. ಜೊತೆಗೆ ನಿರ್ಬಂಧ ಹೇರಿದ ಮೇಲೂ ಅಲ್ಲಲ್ಲಿ ಪಥ ಸಂಚಲನ ನಡೆದಿದೆ. ಇದೀಗ ಕೋರ್ಟ್ ಕೂಡ ಆದೇಶಕ್ಕೆ ತಡೆ ನೀಡಿದೆ.

Share This Article
Enable Notifications OK No thanks