ನ.1ರಂದು ಕನ್ನಡ ರಾಜ್ಯೋತ್ಸವ : ಗಣ್ಯರು ಭಾಗಿ

1 Min Read

ಚಿತ್ರದುರ್ಗ. ಅ.29: ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಬೆಳಿಗ್ಗೆ 9ಕ್ಕೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ “ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮ ಆಯೋಜಿಸಲಾಗಿದೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ನೀಡುವರು. ಸಂಸದ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.

ಗೌರವಾನ್ವಿತ ಅತಿಥಿಗಳಾಗಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತ ರಮೇಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಹಾಗೂ ನಗರಸಭೆ ಸದಸ್ಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಜಿಲ್ಲೆಯ ಎಲ್ಲಾ ಕನ್ನಡ ಪರ ಸಂಘಟನೆಗಳು ಭಾಗವಹಿಸುವರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ 7 ಗಂಟೆಗೆ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದಿಂದ ಶ್ರೀ ಭುವನೇಶ್ವರಿ ಭಾವಚಿತ್ರ, ಕಲಾ ತಂಡಗಳು ಹಾಗೂ ಸ್ಥಬ್ದ ಚಿತ್ರಗಳೊಂದಿಗೆ ಪೊಲೀಸ್ ಕವಾಯತು ಮೈದಾನದವರೆಗೆ ಮೆರವಣಿಗೆ ಜರುಗಲಿದೆ. ಅದೇ ದಿನ ಸಂಜೆ 6 ಗಂಟೆಗೆ ನಗರದ ಮದಕರಿ ಸರ್ಕಲ್ ಬಳಿಯ ವಾಲ್ಮೀಕಿ ಭವನದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article