Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್

---Advertisement---

 

 

ಚಿತ್ರದುರ್ಗ ಅ. 30 :  ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ಅ. 31 ರಂದು ಒಂದು ದಿನದ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನ 01 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು.  ಬಳಿಕ ನಗರದಲ್ಲಿನ ಮದಕರಿ ನಾಯಕ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡುವರು.

 

ನಂತರ ಚಿತ್ರದುರ್ಗ ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ, ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.  ಮಧ್ಯಾಹ್ನ 1.30 ಗಂಟೆಗೆ ನಗರದ ಜಾಮಿಯಾ ಮಸೀದಿಗೆ ಭೇಟಿ ನೀಡುವರು.  ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಅನ್ವರ್ ಬಾಷಾ ಅವರ ನಿವಾಸಕ್ಕೆ ಭೇಟಿ ನೀಡಿ, ಸಂಜೆ 5.30 ಗಂಟೆಗೆ ವಿಜಯನಗರ ಜಿಲ್ಲೆ ಕೂಡ್ಲಿಗಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...