ಬೆಂಗಳೂರು: ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ನಾತನಾಡಿದ್ದ ಕನ್ನೇರಿ ಮಠದ ಕಾಡುಸಿದ್ದೇಶ್ವರ ಸ್ವಾಮಿಗೆ ಕೋರ್ಟ್ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ನಡೆದ ಸಮಾರಂಭಕ್ಕೆ ತೆರಳಿದ್ದ ಕಾಡಸಿದ್ದೇಶ್ವರ ಸ್ವಾಮೀಜಿ, ಕರ್ನಾಟಕದ ಕೆಲ ಲಿಂಗಾಯತ ಸ್ವಾಮೀಜಿಗ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ಎರಡು ತಿಂಗಳಿನಿಂದ ದೇವಾಲಯಕ್ಕೆ ಹೋಗಬೇಡಿ ಎಂದು ಪ್ರಚಾರ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳ ಕೃಪಾಪೋಷಿಯ ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ಕಲಾವಿದರು ಸೇರಿ ಬಸವ ಸಂಸ್ಕೃತಿ ಅಭಿಯಾನ ಎನ್ನುವ ನಾಟಕವನ್ನು ರಾಜ್ಯಾದ್ಯಂತ ಮಾಡುತ್ತಿದ್ದಾರೆ. ಗುಡಿಯಲ್ಲಿ ದೇವರಿಲ್ಲ ಮನೆಯಲ್ಲಿನ ದೇವರನ್ನು ಹೊಳೆಗೆ ಹಾಕಿ ಎನ್ನುತ್ತಿದ್ದಾರೆ. ಇವರಿಗೆ ನಾನೇ ಬುದ್ದಿ ಹೇಳಬೇಕು ಎಂದು ಕೆಲ ಅಸಂವಿಧಾನಿಕ ಪದ ಬಳಕೆ ಮಾಡಿದ್ದರು.
ಈ ಸಂಬಂಧ ಲಿಂಗಾಯತ ಮಠಗಳ ಒಕ್ಕೂಟ ದಾಖಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಒಂದು ಕೋಟಿ ರೂಪಾಯಿ ಪರಿಹಾರಕ್ಕೆ ಒತ್ತಾಯಿಸಿತ್ತು. ಸ್ವಾಮೀಜಿ ಹೇಳಿಕೆಯಿಂದ ಲಿಂಗಾಯತ ಮಠಗಳ ಒಕ್ಕೂಟದ ಗೌರವಕ್ಕೆ ಧಕ್ಕೆಯಾಗಿದೆ. ಇಂತಹ ಹೇಳಿಕೆ ನೀಡದಂತೆ ಸ್ವಾಮೀಜಿಗೆ ನಿರ್ಬಂಧ ವಿಧಿಸುವಂತೆ ಮನವಿ ಮಾಡಿದ್ದರು.
ಈ ಪ್ರಕರಣ ಸಂಬಂಧ ಒಕ್ಕೂಟದ ಪರವಾಗಿ ವಕೀಲೆ ವಿಜೇತಾ ಆರ್. ನಾಯ್ಕ್ ವಾದ ಮಂಡಿಸಿದರು. ಈ ವಾದ ಆಲಿಸಿದ ಬೆಂಗಳೂರಿನ 31 ನೇ ಸಿಸಿಹೆಚ್ ಕೋರ್ಟ್, ಅವಹೇಳನಕಾರಿ ಹೇಳಿಕೆ ನೀಡದಂತೆ ನಿರ್ಬಂಧಿಸಿ ಮಧ್ಯಂತರ ಆದೇಶಿಸಿದ್ದು, ಈ ಬಗ್ಗೆ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿದೆ. ಸ್ವಾಮೀಜಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ 2 ತಿಂಗಳ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸ್ವಾಮೀಜಿ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠದ ಮೊರೆ ಹೋಗಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















