Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಹಿತಿ ಡಾ.ಬಿ.ಎಲ್.ವೇಣು ಅವರಿಗೆ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 02 : ನಾಡಿನ ಹೆಸರಾಂತ ಸಾಹಿತಿ ಡಾ.ಬಿ.ಎಲ್.ವೇಣು ಅವರು ‘ಕೆಂಧೂಳಿ ರಾಜ್ಯೋತ್ಸವ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕೆಂಧೂಳಿ ಪತ್ರಿಕೆ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಹಿತ್ಯ, ಪತ್ರಿಕೋದ್ಯಮ, ಕೃಷಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಪ್ರತಿ ವರ್ಷ ಪ್ರಶಸ್ತಿ ಕೊಡಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಚಿತ್ರದುರ್ಗದ ಹಿರಿಯ ಸಾಹಿತಿ ಡಾ.ಬಿ.ಎಲ್.ವೇಣು ಅವರಿಗೆ ಮೊದಲನೇ ವರ್ಷದ ಪ್ರಶಸ್ತಿಯನ್ನು ಕೊಡಲು ಸಮಿತಿ ಆಯ್ಕೆ ಮಾಡಿದೆ.

ಪ್ರಶಸ್ತಿಯೂ 10 ಸಾವಿರ ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ. ಈ ಪ್ರಶಸ್ತಿಯನ್ನು ಶೀಘ್ರ ನೀಡಲಾಗುವದು.
ಡಾ.ಶಿವಕುಮಾರ್ ಕಂಪ್ಲಿ ಅಧ್ಯಕ್ಷತೆಯಲ್ಲಿ ತುರುವನೂರು ಮಂಜುನಾಥ, ಶ್ರೀದೇವಿ ಕೆರೆಮನೆ ಮತ್ತು ಪರಶಿವ ಧನಗೂರು
ಅವರ ಸಮಿತಿ ಈ ಆಯ್ಕೆ ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now