Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನ. 4 ರಂದು ಪಿಂಚಣಿದಾರರ ಜೀವನ ಪ್ರಮಾಣ ಪತ್ರ ನೋಂದಣಿ ಅಭಿಯಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ನ. 02 : ಕರ್ನಾಟಕ ಅಂಚೆ ಮತ್ತು ದೂರಸಂಪರ್ಕ ನಿವೃತ್ತ ನೌಕರರ ಸಂಘ  ಬೆಂಗಳೂರು ಇವರಿಂದ ಹೊಳಲ್ಕೆರೆ ರಸ್ತೆಯಲ್ಲಿನ ಚಿತ್ರದುರ್ಗ ಪ್ರಧಾನ ಅಂಚೆ ಕಚೇರಿಯಲ್ಲಿ ನವಂಬರ್ 4 ರ ಮಂಗಳವಾರ  ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕೇಂದ್ರ ರಾಜ್ಯ ಹಾಗೂ ಸಾರ್ವಜನಿಕ ಕ್ಷೇತ್ರದ ನಿವೃತ್ತ ನೌಕರರಿಗೆ, ಪಿಂಚಣಿಯನ್ನು ಮುಂದುವರೆಸುವ ಸಲುವಾಗಿ ಉಚಿತವಾಗಿ ಜೀವನ ಪ್ರಮಾಣ ಪತ್ರ ಅಭಿಯಾನವನ್ನು ((Digital life certificate campaign)) ಏರ್ಪಡಿಸಲಾಗಿದೆ.

ಈ ಅಭಿಯಾನಕ್ಕೆ ನಿವೃತ್ತ ಉಪ ಅಂಚೆ ಪಾಲಕರು (ಲೆಕ್ಕ) ದಾವಣಗೆರೆ ಭಾರತೀಯ ಅಂಚೆ ಇಲಾಖೆ, ಸ್ವಯಂಸೇವಕರು ಸಂಘದ ಸದಸ್ಯರು ಹಾಗೂ ಕೊ ಆರ್ಡಿನೇಟರಾದ ಬಿ. ಟಿ.ಚಂದ್ರಶೇಖರ್, ನಿವೃತ್ತ ಉಪ ದಾಖಲಾತಿ ಅಧಿಕಾರಿ ದಾವಣಗೆರೆ ರೈಲ್ವೆ ಮೇಲ್ ಸೇವೆ ಭಾರತೀಯ ಅಂಚೆ ಇಲಾಖೆ ಸಂಘದ ಸದಸ್ಯರಾದ ಎನ್ ಪ್ರಕಾಶ್, ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿ ದಾವಣಗೆರೆಯ ಭಾರತೀಯ ಅಂಚೆ ಇಲಾಖೆ ತೋಟಪ್ಪ, ನಿವೃತ್ತ ಅಂಚೆ ಲೆಕ್ಕಾಧಿಕಾರಿ ಪಿ.ಎಂ.ಕೊಟ್ರಬಸಪ್ಪ ಜೀವನ ಪ್ರಮಾಣ ಪತ್ರ ಅಭಿಯಾನದಲ್ಲಿ ಭಾಗವಹಿಸುವರು.

ಚಿತ್ರದುರ್ಗ ಎಲ್ಲಾ ಕೇಂದ್ರ ಸರ್ಕಾರದ ನಿವೃತ್ತ ನೌಕರರು ರಾಜ್ಯ ಸರ್ಕಾರದ ನಿವೃತ್ತ ನೌಕರರು ಹಾಗೂ ಕೇಂದ್ರ ಸಾರ್ವಜನಿಕ ಸಂಸ್ಥೆಯ ನಿವೃತ್ತ ನೌಕರರು ಅಭಿಯಾನದ ಸದುಪಯೋಗ ಪಡೆದುಕೊಂಡು ತಮ್ಮ ತಮ್ಮ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕೆಂದು ವಿನಂತಿಸಿಕೊಳ್ಳಲಾಗಿದೆ.

ಜೀವನ ಪ್ರಮಾಣ ಪತ್ರದ ಅಭಿಯಾನಕ್ಕೆ ಬರುವ ನಿವೃತ್ತ ನೌಕರರು ತಮ್ಮ ಪಿಂಚಣಿ ಪುಸ್ತಕ, ಪಿಂಚಣಿ ಜಮಾ ಆಗುತ್ತಿರುವ ಬ್ಯಾಂಕ್ ಅಥವಾ ಅಂಚೆ ಇಲಾಖೆಯ ಉಳಿತಾಯ ಖಾತೆ ಪಾಸ್ ಬುಕ್,  ಆಧಾರ್ ಕಾರ್ಡ್ ಮತ್ತು ಆಧಾರ್ ಕಾರ್ಡಿಗೆ ಜೋಡಣೆಯಾಗಿರುವ ಮೊಬೈಲ್ ದಾಖಲೆಗಳನ್ನು ಕಡ್ಡಾಯವಾಗಿ ತರತಕ್ಕದ್ದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...