Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

120 ಕುರಿಗಳು ಕಳ್ಳತನ | ಹಿರಿಯೂರು ಪೊಲೀಸರಿಂದ ಆರೋಪಿ ಬಂಧನ

---Advertisement---

ಸುದ್ದಿಒನ್, ಹಿರಿಯೂರು, ನವೆಂಬರ್. 04 : ತಾಲ್ಲೂಕಿನ ಸಕ್ಕರ ಗ್ರಾಮದಿಂದ ಕುರಿಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಕೇವಲ 24 ಗಂಟೆಗಳ ಒಳಗೆ ಪತ್ತೆಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಅಬ್ಬಿನಹೊಳೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಶಿರಾ ತಾಲ್ಲೂಕಿನ ದ್ವಾರನಕುಂಟೆ ಗ್ರಾಮದ 35 ವರ್ಷದ ಲಕ್ಷ್ಮೀಕಾಂತ ಬಂಧಿತ ಆರೋಪಿ. ತಾಲ್ಲೂಕಿನ ಸಕ್ಕರ ಗ್ರಾಮದ ಗುಂಡಪ್ಪ ಎಂಬುವವರ ಜಮೀನಿನಲ್ಲಿದ್ದ ಕುರಿ ರೊಪ್ಪದಿಂದ ಸುಮಾರು 9 ಲಕ್ಷದ 92 ಸಾವಿರ ರೂಪಾಯಿ ಬೆಲೆಬಾಳುವ 120 ಕುರಿಗಳನ್ನು ಇದೇ ನವೆಂಬರ್ 01 ರಂದು ರಾತ್ರಿ 09-00 ಗಂಟೆಯ ವೇಳೆಯಲ್ಲಿ ಕದ್ದೊಯ್ದಿದ್ದ. ಈ ಕುರಿತು ನವೆಂಬರ್ 03 ರಂದು ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆಗಿಳಿದ ಅಬ್ಬಿನಹೊಳೆ ಪೊಲೀಸರು ಕಳ್ಳತನ ಮಾಡಿದ್ದ ಆರೋಪಿಯ ಜಾಡನ್ನು ಯಶಸ್ವಿಯಾಗಿ ಭೇದಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಚಿತ್ರದುರ್ಗ ಎಸ್.ಪಿ. ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶಿವಕುಮಾರ ಕೆ.ಎಸ್ ಪಿಎಸ್, ಹಿರಿಯೂರು ಪೊಲೀಸ್ ಉಪಾಧೀಕ್ಷಕರಾದ ಶಿವಕುಮಾರ್ ರವರ ಮಾರ್ಗದರ್ಶನದಲ್ಲಿ ಐಮಂಗಲ ವೃತ್ತ ನಿರೀಕ್ಷಕರಾದ ಗುಡ್ಡಪ್ಪ ಎನ್ ಹಾಗೂ ಅಬ್ಬಿನಹೊಳೆ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರವರಾದ ದೇವರಾಜ್, ಪ್ರೊ. ಪಿಎಸ್ಐ ಹುಸೇನ್ ಅ ಸುಳಿಕೇರಿ  ಮತ್ತು ಸಿಬ್ಬಂದಿಯವರಾದ ಎಎಸ್ಐ ರಾಮಣ್ಣ ಹಾಗೂ ನಿಂಗರಾಜ್, ದೇವೇಂದ್ರಪ್ಪ, ಹಳೆಯಳನಾಡು ನಾಗರಾಜ್, ಹಿರಿಯೂರು ಗ್ರಾಮಾಂತರ ಠಾಣೆಯ ಸಿದ್ದಲಿಂಗೇಶ್ವರ, ಬಬ್ಬೂರು ನಾಗರಾಜ್, ದಿಲೀಪ್, ರುದ್ರೇಶ್, ನಾಗಣ್ಣ ಹಾಗೂ ಚಾಲಕರಾದ ಹರ್ಷ ರವರುಗಳು ಕಾರ್ಯಾಚರಣೆ ನಡೆಸಿ ಆಪಾದಿತನನ್ನು ಕುರಿಗಳೊಂದಿಗೆ ಬಂಧಿಸಿ ಬಡ ರೈತನಿಗೆ ನ್ಯಾಯ ಒದಗಿಸಿದ ಕಾರ್ಯವನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಷಿಸಿರುತ್ತಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now