ಸುದ್ದಿಒನ್, ಚಿತ್ರದುರ್ಗ, ನವೆಂಬರ್. 08 : ವಿಜಯ್ ಕುಮಾರ್ ಮತ್ತು ರಾಮಣ್ಣ ಅವರು ನಿರ್ಮಿಸಿ ರಾಘು ಶಿವಮೊಗ್ಗ ಅವರ ನಿರ್ದೇಶನದ ʼದಿ ಟಾಸ್ಕ್ ಚಿತ್ರʼ ನವೆಂಬರ್ 21ರಂದು ಭರ್ಜರಿಯಾಗಿ ಬಿಡುಗಡೆಯಾಗಲಿದ್ದು ಚಿತ್ರ ವೀಕ್ಷಿಸಿ ಪ್ರೋತ್ಸಾಹಿಸಿ ಎಂದು ಕಾಂಗ್ರೆಸ್ ಮುಖಂಡರು ಹಾಗೂ ರಾಜ್ಯಮಟ್ಟದ ಸಾವಯವ ಕೃಷಿ ಉತ್ಪನ್ನ ಸಮಿತಿಯ ಮಾಜಿ ಅಧ್ಯಕ್ಷರಾದ ಬಿ ಸೋಮಶೇಖರ್ ಅವರು ಹೇಳಿದರು.
ದಿ ಟಾಸ್ಕ್ ಚಿತ್ರದ ಪ್ರಚಾರಾರ್ಥವಾಗಿ ಚಿತ್ರದುರ್ಗದ ನಿವೃತ್ತ ಪೊಲೀಸ್ ನೌಕರರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಎಲ್ಲರೂ ಸೇರಿ ಒಂದು ಒಳ್ಳೆಯ ಸಿನಿಮಾವನ್ನು ಮಾಡಿದ್ದಾರೆ. ಕಳೆದ ವಾರ ಹಾಡನ್ನು ಬಿಡುಗಡೆ ಮಾಡಿದ್ದರು. ಅದು ತುಂಬಾ ಜನಪ್ರಿಯತೆ ಗಳಿಸಿದೆ. ನಾನೂ ಸಹ ನೋಡಿದ್ದೇನೆ. ಈ ಚಿತ್ರ ಯಶಸ್ವಿಯಾಗಲಿದೆ ಎಂಬ ಭರವಸೆ ಇದೆ. ಚಿತ್ರದುರ್ಗದಲ್ಲಿ ಈ ಸಿನಿಮಾ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಶುಭ ಕೋರಿದರು.
ನಟ ಜಯಸೂರ್ಯ ಅವರು ಮಾತನಾಡಿ, ಒಂದು ಒಳ್ಳೆಯ ಪ್ರಯತ್ನ ಮಾಡಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹ ಇರಲಿ. ವಿಜಯ್ ಕುಮಾರ್ ಮತ್ತು ರಾಮಣ್ಣ ಅವರು ಅವಕಾಶ ನೀಡಿದ್ದಾರೆ. ಯಂಗ್ ಏಜಿನವರಿಗೆ ಈ ಚಿತ್ರ ಮೆಚ್ಚುಗೆಯಾಗಲಿದೆ. ನಿರ್ದೇಶಕರ ರಾಘು ಶಿವಮೊಗ್ಗ ಹಾಗೂ ನಿರ್ಮಾಪಕರಿಗೆ ಧನ್ಯವಾದಗಳು ಎಂದರು.
ಅದ್ಧೂರಿ ತಾರಾಗಣ :
ಇದೇ ನವೆಂಬರ್ 21ರಂದು ಭರ್ಜರಿಯಾಗಿ ಬಿಡುಗಡೆಯಾಗಲಿರುವ ದಿ ಟಾಸ್ಕ್ ಚಿತ್ರವನ್ನು ವಿಜಯ್ ಕುಮಾರ್ ಮತ್ತು ರಾಮಣ್ಣ ಅವರು ನಿರ್ಮಿಸಿದ್ದು, ನಿರ್ದೇಶಕ ರಾಘು ಶಿವಮೊಗ್ಗ ಅವರ ನಿರ್ದೇಶನ ಈ ಚಿತ್ರಕ್ಕಿದೆ. ಜಯಸೂರ್ಯ ಆರ್ ಆಜಾದ್, ಸಾಗರ್ ರಾಮ್, ಅಚ್ಯುತ್ ಕುಮಾರ್, ಶ್ರೀಲಕ್ಷ್ಮೀ, ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ ಅದ್ಧೂರಿ ತಾರಾಗಣ ಈ ಚಿತ್ರದಲ್ಲಿದೆ.
ಮುಖಂಡರಾದ ಶ್ರೀ ನರೇಂದ್ರ ಬಾಬು ಬಿಬಿಆರ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















