Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಿಥಿ ಸಿನಿಮಾದ ಗಡ್ಡಪ್ಪ ಇನ್ನಿಲ್ಲ..!

---Advertisement---

ತಿಥಿ‌ ಸಿನಿಮಾದ ಮೂಲಕ ಗಡ್ಡಪ್ಪ ಎಂದೇ ಖ್ಯಾತಿ ಪಡೆದಿದ್ದಂತ ಚೆನ್ನಪ್ಪ ಗೌಡ ಇಂದು ನಿಧನರಾಗಿದ್ದಾರೆ. ಗಡ್ಡಪ್ಪನಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಅಸ್ತಮಾದಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮಂಡ್ಯ ಜಿಲ್ಲೆಯ ನೊದೆ ಕೊಪ್ಪಲು ಗ್ರಾಮದಲ್ಲಿ ಚೆನ್ನೇಗೌಡ ಅವರು ನಿಧನರಾಗಿದ್ದಾರೆ. ಮೊದಲೇ ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇದರ ನಡುವೆ ಇತ್ತೀಚೆಗಷ್ಟೇ ಬಿದ್ದು, ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಸೊಂಟಕ್ಕೆ ಆಪರೇಷನ್ ಕೂಡ ಆಗಿತ್ತು. ಆದರೆ ವಯಸ್ಸು ಹೆಚ್ಚಾದ ಕಾರಣವೋ ಏನೋ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸದ್ಯ ಸ್ವಗ್ರಾಮದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಅವರ ಅಭಿಮಾನಿಗಳಿಗೆ, ಸಂಬಂಧಿಕರಿಗೆ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ನಾಳೆ ಅಂತ್ಯ ಸಂಸ್ಕಾರ ನಡೆಸಲಿದ್ದಾರೆ. ನೊದೆಕೊಪ್ಪಲು ಗ್ರಾಮದಲ್ಲಿಯೇ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಗಡ್ಡಪ್ಪ ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ.

ತಿಥಿ ಸಿನಿಮಾ ಸಂಪೂರ್ಣವಾಗಿ ನ್ಯಾಚುರಲ್ ಆಗಿ ಮಾಡಿದ್ದಂತ ಸಿನಿಮಾ. ಗಡ್ಡಪ್ಪ ಆ ಸಿನಿಮಾಗೂ ಮುನ್ನ ಎಲ್ಲಿಯೂ ನಟನೆ ಮಾಡಿ ಅನುಭವವಿರಲಿಲ್ಲ. ಆದರೂ ತಿಥಿ ಸಿನಿಮಾದಲ್ಲಿ ನ್ಯಾಚುರಲ್ ಆಗಿನೇ ಅದ್ಭುತ ನಟನೆ ಮಾಡಿದ್ದರು. ತಿಥಿ ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ಸಿನಿಮಾವಾಗಿತ್ತು. ಈ ಸಿನಿಮಾದಲ್ಲಿ ಗಡ್ಡಪ್ಪ ತುಂಬಾ ಫೇಮಸ್ ಆದರು. ನಂತರ ‘ತರ್ಲೆ ವಿಲೇಜ್’ ‘‘ಏನ್ ನಿನ್ ಪ್ರಾಬ್ಲಮ್ಮು’ ಚಿತ್ರದಲ್ಲಿ ನಟಿಸಿದ್ದರು. ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯ ಮಾಡಿದ್ದರು. ಆದರೆ ಇಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now